ರಾಜ್ಯ

ಧಾರವಾಡ ಜಿಲ್ಲಾಡಳಿತದಿಂದ ಕೊರೋನಾ ಸ್ವಯಂ ಸೇವಕರ ಆಹ್ವಾನ

ಧಾರವಾಡ prajakiran.com : ಜಿಲ್ಲೆಯಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕು ತಡೆಗಟ್ಟುವ ಸಲುವಾಗಿ ಧಾರವಾಡ ಜಿಲ್ಲಾಡಳಿತ ಹಾಗೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯೊಂದಿಗೆ ಕೈ ಜೋಡಿಸುವ ಸಲುವಾಗಿ ಕೋವಿಡ್ ನಿಯಂತ್ರಣಕ್ಕೆ ಸ್ವಯಂ ಸೇವಕರ  ತಂಡ ರಚಿಸುತ್ತಿದೆ.

ಹುಬ್ಬಳ್ಳಿ ಧಾರವಾಡ ಮಹಾನಗಪಾಲಿಕೆಯ ಎಲ್ಲಾ ವಾರ್ಡು ಮಟ್ಟದ ಕಾರ್ಯಪಡೆಗಳನ್ನು ರಚಿಸಿ, ಜನರಲ್ಲಿ ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಸರ್ ಬಳಕೆ, ಜೈವಿಕ ತ್ಯಾಜ್ಯ ವಿಲೇವಾರಿ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವುದು.

ಮಾಸ್ಕ್ ಧರಿಸದವರು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವವರಿಗೆ ದಂಡ ವಿಧಿಸುವುದು, ದುರ್ಬಲ ಆರೋಗ್ಯ ಹೊಂದಿದವರಿಗೆ ಇತರ ಚಿಕಿತ್ಸೆ, ಔಷಧಿಗಳ ಪೂರೈಕೆಗೆ ನೆರವಾಗುವುದು ಮತ್ತಿತರ ಚಟುವಟಿಕೆಗಳನ್ನು ಕೈಗೊಳ್ಳಲು ಸ್ವಯಂ ಸೇವಕರನ್ನು ಆಹ್ವಾನಿಸಿದೆ.

ಧಾರವಾಡ ಜಿಲ್ಲಾಡಳಿತದೊಂದಿಗೆ ಕೈಜೋಡಿಸಿ ಕೊರೋನಾ ವಿರುದ್ಧ ಹೋರಾಡಲು ಇದೊಂದು ಸದಾವಕಾಶವಾಗಿದೆ.  ಎಲ್ಲಾ ವಾರ್ಡುಗಳಲ್ಲಿ ಸ್ವಯಂ ಸೇವಕರ ಅಗತ್ಯವಿದೆ.

ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿಗಳು ಆಹ್ವಾನಿಸಿದ್ದು, ನೀವೂ ಸಹ ಈ ಹೋರಾಟದಲ್ಲಿ ಜಿಲ್ಲಾಡಳಿತದೊಂದಿಗೆ ಕೈ ಜೋಡಿಸಲು ಬಯಸಿದ್ದರೆ, ಕೋವಿಡ್ -೧೯ ಸವಾಲುಗಳನ್ನು ನಿವಾರಿಸಲು ಸಹಾಯ ಮಾಡಲು ನಿಮ್ಮ ಪರಿಣತಿ ಮತ್ತು ಸಂಪನ್ಮೂಲಗಳನ್ನು ಬಳಸಿಕೊಂಡು ಜಿಲ್ಲಾಡಳಿತದೊಂದಿಗೆ ಸಹಕರಿಸಲು  ಆಸಕ್ತರು ಸ್ವಯಂ ಸೇವಕರಾಗಲು ಕೆಳಗೆ ನೀಡಿರುವ ಲಿಂಕ್ ಬಳಸಿ,  https://forms.gle/UYqVr2kawrgnd1Xh9 ನಲ್ಲಿ  ಹೆಸರು, ವಿವರ ನೋಂದಾಯಿಸಿಕೊಳ್ಳಲು  ಕೋರಲಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *