ರಾಜ್ಯ

ಧಾರವಾಡ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಧಾರವಾಡ prajakiran.com : ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಧಾರವಾಡ ಜಿಲ್ಲಾ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದವರು ಕಳೆದ ಕೆಲ ದಿನಗಳಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.

ಧಾರವಾಡ ಡಿಎಚ್ಒ ಕಚೇರಿ ಆವರಣದಲ್ಲಿ ಆರೋಗ್ಯ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ಹೊರ ಹಾಕಿದರು.

ಇನ್ನು ಆರೋಗ್ಯ ಇಲಾಖೆ ಮತ್ತು ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಧಾರವಾಡ ಜಿಲ್ಲಾದ್ಯಂತ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ನೌಕರರು ಪ್ರತಿಭಟನೆಯಲ್ಲಿ ಭಾಗಿಯಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಅಲ್ಲದೇ, ಕೋವಿಡ್ ಸಂದರ್ಭದಲ್ಲಿ ನಮ್ಮ ಆರೋಗ್ಯಕ್ಕೆ ತೊಂದ್ರೇ ಆಗದಂತೆ ಸೇವಾ ಭದ್ರತೆ ಒದಗಿಸುವುದರ ಜೊತೆಗೆ ಹೆಚ್ ಆರ್  ಪಾಲಿಸಿ ಒಳಗೊಂಡಂತೆ ವಿವಿಧ ಬೇಡಿಕೆಯನ್ನು ರಾಜ್ಯ ಸರ್ಕಾರ ಆದಷ್ಟು ಬೇಗ ಈಡೇರಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.

ಜನಪ್ರತಿನಿಧಿಗಳು ಹಾಗೂ ವಿರೋಧ ಪಕ್ಷದವರು ಸರ್ಕಾರದ ಮೇಲೆ ಒತ್ತಡ ತರಬೇಕು. ಇನ್ನು ನಮ್ಮ ವಿವಿಧ ಬೇಡಿಕೆಗಳು ಈಡೇರಿಸದೇ ಹೋದ್ರೆ ಮುಂದಿನ ದಿನಗಳಲ್ಲಿ ಸರ್ಕಾರದ ವಿರುದ್ಧ ಉಗ್ರ ಹೋರಾಟ ಮಾಡವುದು ಅನಿವಾರ್ಯವಾಗಲಿದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಆಸ್ಪತ್ರೆ, ಕಿಮ್ಸ್, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೂ ಗುತ್ತಿಗೆ, ಹೊರಗುತ್ತಿಗೆ ನೌಕರರು ಭಾಗಿಯಾಗಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *