ಜಿಲ್ಲೆ

ಧಾರವಾಡದಲ್ಲಿ ಧಾರಾಕಾರ ಮಳೆಗೆ ಮನೆ, ಅಪಾರ್ಟ್ ಮೆಂಟ್ ಗಳಿಗೆ ನುಗ್ಗಿದ ನೀರು

ಧಾರವಾಡ prajakiran.com : ಮಂಗಳವಾರ ಸಂಜೆ ಧಾರವಾಡ ನಗರ ಸೇರಿದಂತೆ ಗ್ರಾಮಾಂತರ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಿದೆ.

ಕಳೆದ ಎರಡು ದಿನಗಳಿಂದ ಬಿಡುವು ನೀಡಿದ್ದ ಮಳೆರಾಯ ಇಂದು ಮತ್ತೆ ತನ್ನ ಅಟ್ಟಹಾಸ ಮೆರೆದಿದ್ದಾನೆ. ಮಂಗಳವಾರ ಮಧ್ಯಾಹ್ನದವರೆಗೂ ಬಿಸಿಲು ಹಾಗೂ ಸೆಕೆಯ ವಾತಾವರಣವಿತ್ತು.

ಮಧ್ಯಾಹ್ನದ ನಂತರ ಆಕಾಶದಲ್ಲಿ ಕಪ್ಪಿಟ್ಟ ಮೋಡಗಳು ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಮಳೆ ಸುರಿಯುವಂತೆ ಮಾಡಿದವು.

ಗಾಳಿ ಹಾಗೂ ಗುಡುಗು, ಸಿಡಿಲಿನ ಮಧ್ಯೆ ಸುರಿದ ಮಳೆಯಿಂದಾಗಿ ನಗರದ ತಗ್ಗು ಪ್ರದೇಶದ ರಸ್ತೆಗಳು ಜಲಾವೃತಗೊಂಡವು.

ಅದರಲ್ಲೂ ಬಾರಾಕೋಟ್ರಿ, ಕಲ್ಯಾಣ ನಗರ, ಕೆಸಿ ಪಾರ್ಕ, ಉದಯ ಹಾಸ್ಟೆಲ್ ಹಿಂಭಾಗ, ರೈಲ್ವೆ ಸ್ಟೇಷನ್ ಹಿಂಭಾಗ ಸೇರಿದಂತೆ ಅನೇಕ ಪ್ರದೇಶದಲ್ಲಿ ಮಳೆ ರೌದ್ರನರ್ತನಕ್ಕೆ ಸ್ಥಳೀಯ ನಿವಾಸಿಗಳು ಬೆಚ್ಚಿ ಬಿದ್ದರು.

ನೀರು ಹೊರ ಹಾಕಲು ಹರಸಾಹಸ ಪಡಬೇಕಾಯಿತು.ಇದರಿಂದಾಗಿ ಕಂಗಲಾದ ಜನತೆಯಿಂದ ಅಧಿಕಾರಿಗಳಿಗೆ ಹಾಗೂ ವಿಶೇಷವಾಗಿ ಜಿಲ್ಲೆಯ ಜನಪ್ರತಿನಿಧಿಗಳಿಗೆಹಿಡಿಶಾಪ ಹಾಕಿದ್ದು ಪ್ರಜಾಕಿರಣ.ಕಾಮ್ ಗೆ ಕಂಡು ಬಂತು.

ಧಾರವಾಡ ಜಿಲ್ಲೆಯಲ್ಲಿ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನೂ ನೀಡಿತ್ತು.

ಅದರಂತೆ ಭಾರೀ ಮಳೆಯಾಗಿರುವುದು ಕೆಲ ಗಂಟೆಗಳ ಕಾಲ ಜನಜೀವನ ಅಸ್ತವ್ಯಸ್ತಗೊಳಿಸಿತು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *