ರಾಜ್ಯ

ಧಾರವಾಡದಲ್ಲಿ ಬೆಡ್‍ಗಳ ನಿರ್ವಹಣೆಗಾಗಿ ಹೆಲ್ಪ್ ಲೈನ್

ಧಾರವಾಡ prajakiran.com : ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಮತ್ತು ಬೆಡ್‍ಗಳ ಪೂರೈಕೆ ಮಾಡಲು ಜಿಲ್ಲಾಡಳಿತದಿಂದ ನೂತನ ಕ್ರಮ ಕೈಗೊಂಡಿದ್ದು, ಇಂದಿನಿಂದ ದಿನದ 24 ಗಂಟೆ ಕರ್ತವ್ಯ ನಿರ್ವಹಿಸುವ 08047168111 ಸಹಾಯವಾಣಿಯನ್ನು ಜಿಲ್ಲಾ ಕೇಂದ್ರದಲ್ಲಿ ಸ್ಥಾಪಿಸಲಾಗಿದೆ.

ಈ ಸಹಾಯವಾಣಿಗೆ ಕೋವಿಡ್ ಸೋಂಕಿತರು, ಸೋಂಕಿತರ ಕುಟುಂಬದವರು ಕರೆ ಮಾಡಿ ಚಿಕಿತ್ಸೆಗಾಗಿ ಆಸ್ಪತ್ರೆಗಳಲ್ಲಿರುವ ಬೆಡ್ ಮಾಹಿತಿಯನ್ನು ಪಡೆಯಬಹುದು.

ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಮೀಸಲಿರುವ ಬೆಡ್‍ಗಳ ಮಾಹಿತಿಯನ್ನು ನೀಡಲಾಗುತ್ತದೆ.

ಸರ್ಕಾರದ ರೆಫರೆಲ್ ಪಡೆಯಲು ಸೋಂಕಿತರ ಆಧಾರಕಾರ್ಡ್ ಮತ್ತು ಕೋವಿಡ್ ಪಾಸಿಟಿವ್ (ಎಸ್‍ಆರ್‍ಐಎಫ್ ಐಡಿ ಸಂಖ್ಯೆ) ವರದಿಯ ಮಾಹಿತಿಯನ್ನು ಹೊಂದಿರಬೇಕು.

ಅಂತಹವರಿಗೆ ಸರ್ಕಾರದಿಂದ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ.

ಬೆಡ್‍ಗಳ ಸಮಸ್ಯೆ ಉಂಟಾಗದಂತೆ ಸಮರ್ಪಕವಾಗಿ ಕೆಲಸ ನಿರ್ವಹಿಸಲು ಈಗಾಗಲೇ ಪ್ರತಿ ಖಾಸಗಿ ಆಸ್ಪತ್ರೆಗೆ ನೋಡಲ್ ಅಧಿಕಾರಿಗಳನ್ನು ನೇಮಿಸಿ ಅವರ ಹೆಸರು ಮತ್ತು ದೂರವಾಣಿ ಸಂಖ್ಯೆಗಳನ್ನು ಸಾರ್ವಜನಿಕವಾಗಿ ಮಾಧ್ಯಮಗಳ ಮೂಲಕ ಈಗಾಗಲೇ ಪ್ರಕಟಿಸಲಾಗಿದೆ.

ಹೆಲ್ಪ್ ಲೈನ್ ಉತ್ತಮವಾಗಿ ಕಾರ್ಯನಿರ್ವಹಿಸಲು ಧಾರವಾಡ ಉಪವಿಭಾಗಾಧಿಕಾರಿಗಳಿಗೆ ಉಸ್ತುವಾರಿ ನೀಡಿ, ನೋಡಲ್ ಅಧಿಕಾರಿಯನ್ನಾಗಿ ನೇಮಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *