ರಾಜ್ಯ

ವಿದ್ಯುತ್ ವಿತರಣಾ ಕಂಪನಿಗಳ ಖಾಸಗಿಕರಣ ವಿರುದ್ದ ಧಾರವಾಡದಲ್ಲಿ ಹೆಸ್ಕಾಂ ನೌಕರರ ಪ್ರತಿಭಟನೆ

ಧಾರವಾಡ prajakiran.com : ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿ ಹಾಗೂ ವಿದ್ಯುತ್ ವಿತರಣಾ ಕಂಪನಿಗಳ ಖಾಸಗಿಕರಣ ವಿರೋಧಿಸಿ ಧಾರವಾಡದಲ್ಲಿ ಹೆಸ್ಕಾಂ ನೌಕರರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಮತ್ತು ಸಂಘ ಸಂಸ್ಥೆಗಳ ಒಕ್ಕೂಟ ಫೆಡರೇಶನ್ ಆಫ್ ಕರ್ನಾಟಕ ಎಲೆಟ್ರ್ಕಿಸಿಟಿ ಬೋರ್ಡ್ ಯೂನಿಯನ್ ಮತ್ತುಅಸೋಸಿಯೇಶನ್  ಕರೆ ನೀಡಿದ್ದ ರಾಜ್ಯವ್ಯಾಪ್ತಿ ಪ್ರತಿಭಟನೆಗೆ ಧಾರವಾಡದಲ್ಲಿ ಕೂಡ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕೇಂದ್ರ ಸರಕಾರ ವಿದ್ಯುತ್ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ನಮ್ಮ ಹಕ್ಕಗಳನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯ ಧಾರವಾಡ ಗ್ರಾಮೀಣ ವಿಭಾಗ ಕಚೇರಿ ಎದುರು ಜಮಾಯಿಸಿದ ನೂರಾರು ನೌಕರರು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *