ಜಿಲ್ಲೆ

ಚುನಾವಣಾ ಕರ್ತವ್ಯ ಲೋಪ; ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ಅಮಾನತ್ತುಗೊಳಿಸಿ ಜಿಲ್ಲಾಧಿಕಾರಿ ಆದೇಶ

ನಿಯೋಜಿತ ಕೆಲಸ ನಿರ್ವಹಣೆಯಲ್ಲಿ ಬೇಜವಾಬ್ದರಿತನ;

ಶೋಕಾಸ್ ಗೆ ನಿರ್ಲಕ್ಷ್ಯ ದ ಉತ್ತರ; 

ಧಾರವಾಡ ಪ್ರಜಾಕಿರಣ.ಕಾಮ್ ಏ.09:

ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ 2023 ಸಂಭಂದಿಸಿದಂತೆ ನವಲಗುಂದ ವಿಧಾನಸಭಾ ಮತಕ್ಷೇತ್ರದ ಪ್ಲಾಯಿಂಗ್ ಸ್ಕ್ವಾಡ್ ತಂಡಕ್ಕೆ ನಿಯೋಜಿಸಿ, ಕರ್ತವ್ಯ ನಿರ್ವಹಿಸಲು ಆದೇಶಿಸಲಾಗಿತ್ತು.

ನಿಯೋಜಿತ ಕರ್ತವ್ಯ ನಿರ್ವಹಿಸದೆ ನಿರ್ಲಕ್ಷ್ಯ ತೋರಿದ ಮತ್ತು ಶೋಕಾಷ್ ನೋಟಿಸಗೆ ನಿಯಮ ಬಾಹಿರವಾಗಿ ಬೇಜವಾಬ್ದರಿ ಉತ್ತರಿಸಿ,
ಸರ್ಕಾರಿ ಕೆಲಸದಲ್ಲಿ ನಿಷ್ಕಾಳಜಿತನ ತೋರಿದ ಕಾರಣಕ್ಕಾಗಿ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ನಾಗರಾಜ ಕೂಬಳ್ಳಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಅಮಾನತ್ತುಗೊಳಿಸಿ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಮಾಡಿದ್ದಾರೆ.

 ಹುಬ್ಬಳ್ಳಿ ಹೆಸ್ಕಾಂ ಕಾರ್ಪೋರೇಟ್ ಆಫೀಸ್ ಕಾರ್ಯನಿರ್ವಾಹಕ ಅಭಿಯಂತರ ನಾಗರಾಜ ಕೂಬ್ಬಳ್ಳಿ ಅವರನ್ನು ಫ್ರಾಯಿಂಗ ಸ್ಪ್ಯಾಡ್ ಅಂತಾ ನೇಮಿಸಿ ನಿಯೋಜಿಸಿದ್ದು ಇರುತ್ತದೆ.

ಕಾರ್ಯಾಲಯದಿಂದ ಫ್ಲಾಯಿಂಗ್ ತಂಡದವರು ತಂತ್ರಾಂಶವನ್ನು ಮೊಬೈಲ್‌ನಲ್ಲಿ ಡೌನ್‌ಲೋಡ್ ಮಾಡಿಕೊಂಡು ಪ್ರತಿನಿತ್ಯ ಸದರಿ ತಂತ್ರಾಂಶದ ಮೂಲಕ ಸ್ವೀಕೃತವಾಗುವ ದೂರುಗಳನ್ನು ನಿರ್ವಹಿಸುವಂತೆ ಸೂಚಿಸಿದ್ದು, ಆದರೆ ನಾಗರಾಜ ಕೂಬಳ್ಳಿ ಅವರಿಗೆ ವಹಿಸಿದ ಕೆಲಸವನ್ನು ಸರಿಯಾಗಿ ನಿರ್ವಹಿಸದೇ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕಚೇರಿಯಿಂದ ನೀಡಿದ ಕಾರಣ ಕೇಳುವ ನೋಟಿಸಿಗೆ ಅಸಂಭದ್ದ ಹೇಳಿಕೆ ನೀಡುವುದಲ್ಲದೇ ಅನಾವಶ್ಯಕ ಪತ್ರ ವ್ಯವಹಾರ ಮಾಡಿರುವುದು ಸರಿಯಾದ ಕ್ರಮವಲ್ಲ.

ಕಚೇರಿಯಿಂದ ನೀಡಿದ ಕಾರಣ ಕೇಳುವ ನೋಟಿಸಿಗೆ 24 ಗಂಟೆಯೊಳಗಾಗಿ ಖುದ್ದಾಗಿ ಹಾಜರಾಗಿ ಹೇಳಿಕೆ ನೀಡುವಂತೆ ಸೂಚಿಸಿದ್ದರೂ ಕೂಡ ನಾಗರಾಜ ಅವರು ದಿನಾಂಕ:07-04-2023 ರಂದು ಮಿಂಚಂಚೆ ಸಂದೇಶದ ಮೂಲಕ ಲಿಖಿತ ಹೇಳಿಕೆ ಸಲ್ಲಿಸಿರುವುದು ಸರಿಯಾದ ಕ್ರಮವಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಕಾರ್ಯನಿರ್ವಹಣೆಗೆ ಅಗತ್ಯ ತಂತ್ರಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಸಾಕಷ್ಟು ಬಾರಿ ದೂರವಾಣಿ ಮೂಲಕ ಹಾಗೂ ವಾಟ್ಸ್ ಆಪ್ ಮುಖಾಂತರ ತಿಳಿಸಿದಾಗ್ಯೂ ಸಹ ಸದರಿ ತಂತ್ರಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳದೇ ಇರುವುದರಿಂದ ಹಾಗೂ ವಹಿಸಿದ ಚುನಾವಣೆ ಕಾರ್ಯವನ್ನು ನಿಗದಿತ ಸಮಯದಲ್ಲಿ ನಿರ್ವಹಿಸದೇ ಇರುವುದರಿಂದ ಮುಖ್ಯ ಚುನಾವಣಾಧಿಕಾರಿಗಳಿಗೆ ಹಾಗೂ ಚುನಾವಣಾ ಆಯೋಗಕ್ಕೆ ಮಾಹಿತಿಯನ್ನು ಸಲ್ಲಿಸುವಲ್ಲಿ ತೊಂದರೆಯುಂಟಾಗಿರುತ್ತದೆ.

ಚುನಾವಣೆಯಂತಹ ಮಹತ್ತರ ಕಾರ್ಯದಲ್ಲಿ ಈ ಅಧಿಕಾರಿಯು ಬೇಜವಾಬ್ದಾರಿತನ, ಅವಿಧೇಯತೆ ಹಾಗೂ ಸರಕಾರಿ ನೌಕರನಿಗೆ ಸಲ್ಲದ ರೀತಿಯಲ್ಲಿ ನಡೆದು ಕರ್ನಾಟಕ ನಾಗರೀಕ ಸೇವಾ (ನಡತೆ) ನಿಯಮಗಳು, 2021 3 ನೇ ನಿಯಮದ (1) ನೇ ಉಪನಿಯಮದ (i), (ii) ಮತ್ತು (iii) ನೇ ಖಂಡಗಳನ್ನು ಉಲ್ಲಂಘಿಸಿದ್ದು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಾವಳಿಗಳು, 1957 ಹಾಗೂ ಪ್ರಜಾಪ್ರಾತಿನಿಧ್ಯ ಕಾಯ್ದೆ, 1951 ರಡಿ ಕಲ್ಪಿಸಿದ ಅವಕಾಶಗಳ ಮೇರೆಗೆ ತಕ್ಷಣ ಅಮಾನತ್ತುಗೊಳಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಕಾರ್ಯನಿರ್ವಾಹಕ ಅಭಿಯಂತರ
ನಾಗರಾಜ ಕೂಬಳ್ಳಿ ಅವರು ಕರ್ನಾಟಕ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆ-2023 ನೇದ್ದಕ್ಕೆ ಸಂಬಂಧಿಸಿದಂತೆ ಚುನಾವಣಾ ಕೆಲಸಗಳನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯವಹಿಸಿ ಕರ್ತವ್ಯಲೋಪ ಮಾಡುವುದಲ್ಲದೇ ಚುನಾವಣೆ ಕಾರ್ಯಕ್ಕೆ ತೊಂದರೆಯುಂಟು ಮಾಡಿದ್ದಾರೆ.

ಇವರ ಮೇಲಿನ ಇಲಾಖಾ ವಿಚಾರಣೆ ಬಾಕಿ ಇರಿಸಿ, ಸರಕಾರಿ ಸೇವೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತುಗೊಳಿಸಲಾಗಿದೆ.

ಅಮಾನತ್ತು ಅವಧಿಯಲ್ಲಿ ತಮ್ಮ ಕಾರ್ಯಾಲಯದ ಮುಖ್ಯಸ್ಥರ ಪರವಾನಿಗೆ ಪಡೆಯದೇ ಕೇಂದ್ರಸ್ಥಾನ ಬಿಡತಕ್ಕದ್ದಲ್ಲ. ಮತ್ತು ಅಮಾನತ್ತಿನ ಅವಧಿಯಲ್ಲಿ ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಗಳು, 1958ರ ನಿಯಮ 98ರ ಪುಕಾರ ಜೀವನಾಂಶ ಭತ್ಯೆ ಪಡೆಯಲು ಅರ್ಹರಿರುತ್ತಾರೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಗುರುದತ್ತ ಹೆಗಡೆ ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *