ಆಧ್ಯಾತ್ಮ

ಸವದತ್ತಿ ಯಲ್ಲಮ್ಮನ ಹುಂಡಿಯಲ್ಲಿ ದಾಖಲೆಯ 53.80 ಲಕ್ಷ ಸಂಗ್ರಹ

ವರದಿ : ಪ್ರಶಾಂತ ಹೂಗಾರ.

ಸವದತ್ತಿ prajakiran.com : ನಾಡಿನ ಶಕ್ತಿ ಪೀಠಗಳಲ್ಲಿ ಒಂದಾಗಿರುವ ಸವದತ್ತಿಯ ಶ್ರೀ ರೇಣುಕಾ ದೇವಿಯ ಹುಂಡಿಯಲ್ಲಿ 20 ದಿನಗಳಲ್ಲಿ ದಾಖಲೆಯ 53.80 ಲಕ್ಷ ರೂ. ಹಣ ಸಂಗ್ರಹವಾಗಿದೆ.

ಸವದತ್ತಿ ಯಲ್ಲಮ್ಮನ ದೇವಸ್ಥಾನವು ಕೊರೊನಾ ಹಿನ್ನಲೆ 2020 ರ ಮಾರ್ಚ ನಿಂದ – 2021 ಜನೇವರಿ ಅಂತ್ಯದವರೆಗೂ ಬಂದಾಗಿತ್ತು.

ನಂತರ ಫೆಬ್ರವರಿ 1 ರಿಂದ ಸಾರ್ವಜನಿಕ ಅವಕಾಶಕ್ಕೆ ಪ್ರವೇಶ ನೀಡಿತ್ತಾದರೂ ಮಹಾರಾಷ್ಟ್ರದಲ್ಲಿ ಕೊರೊನಾ ಹೆಚ್ಚುತ್ತಿರುವುದರಿಂದ ಫೆಬ್ರವರಿ 20 ರಂದು ಸಾರ್ವಜನಿಕ ದರ್ಶನವನ್ನು ಮತ್ತೆ ನಿಷೇಧಿಸಿದೆ.

ಈ ಹಿನ್ನೆಲೆಯಲ್ಲಿ ಫೆಬ್ರವರಿ ತಿಂಗಳ 20 ದಿನದಳ ಅವಧಿಯಲ್ಲಿ ದಾಖಲೆಯ 53.80 ಲಕ್ಷ ರೂ. ಹುಂಡಿಯಲ್ಲಿ ಸಂಗ್ರಹವಾಗಿರುವುದು ವಿಶೇಷವಾಗಿದೆ.

ಬುಧವಾರ ಹುಂಡಿ ಹಣ ಎಣಿಕೆ ಕಾರ್ಯ ನಡೆಸಲಾಗಿದ್ದು,, 85 ಜನ ಸಿಬ್ಬಂದಿಗಳು ಎಣಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ರವಿ ಕೋಟಾರಗಸ್ತಿ ತಿಳಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *