ರಾಜ್ಯ

ಧಾರವಾಡ ಜಿಲ್ಲೆಯ ಪಾಸಿಟಿವಿಟಿ ದರ ಶೇ 6.39 ಕ್ಕೆ ಹೆಚ್ಚಳ …!

ಧಾರವಾಡ prajakiran.com ಜ.12 : ಜಿಲ್ಲೆಯಾದ್ಯಂತ ಕೋವಿಡ್-19 ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ಮುಂಜಾಗೃತಾ ಕ್ರಮವಾಗಿ ವಿಪತ್ತು ನಿರ್ವಹಣಾ ಕಾಯ್ದೆ 2005 ರಡಿ ಜಿಲ್ಲೆಯ ಧಾರವಾಡ ನಗರ ಮತ್ತು ಗ್ರಾಮೀಣ ಹಾಗೂ ಹುಬ್ಬಳ್ಳಿ ನಗರ ಮತ್ತು ಗ್ರಾಮೀಣ ತಾಲೂಕಿನಾದ್ಯಂತ ಭೌತಿಕ ತರಗತಿಗಳು, ವಸತಿ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳನ್ನೊಳಗೊಂಡು ಎಲ್ಲಾ ಮಾಧ್ಯಮದ 1 ರಿಂದ 8ನೇ ತರಗತಿವರೆಗಿನ ಶಾಲೆಗಳನ್ನು ನಾಳೆ ಜ.13 ರಿಂದ ಮುಂದಿನ ಆದೇಶದವರೆಗೆ ತೆರೆಯದಂತೆ ನಿರ್ದೇಶಿಸಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಇಂದು (ಜ.12) ಆದೇಶ ಹೊರಡಿಸಿದ್ದಾರೆ.

ಅವರು ಆದೇಶದಲ್ಲಿ ತಿಳಿಸಿರುವಂತೆ, ರಾಜ್ಯದಾದ್ಯಂತ ಕೋವಿಡ್-19 ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ರಾಜ್ಯ ವಿಪತ್ತು ನಿರ್ವಹಣಾ ಕಾರ್ಯಕಾರಿ ಸಮಿತಿಯ ಅಧ್ಯಕ್ಷರೂ ಆಗಿರುವ ಮುಖ್ಯ ಕಾರ್ಯದರ್ಶಿಗಳು ಹಲವಾರು ಮುನ್ನೆಚ್ಚರಿಕಾ ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ.

ಜ.11 ರಂದು ಧಾರವಾಡ ತಾಲೂಕಿನ ಪಾಸಿಟಿವಿಟಿ ದರ ಶೇ.5.38 ಹಾಗೂ ಹುಬ್ಬಳ್ಳಿ ತಾಲೂಕಿನಲ್ಲಿ ಪಾಸಿಟಿವಿಟಿ ರೇಟ್ ಶೇ.11.76 ರಷ್ಟು ಇದೆ.

ಜ. 12ರಂದು ಧಾರವಾಡ ಜಿಲ್ಲೆಯ ಪಾಸಿಟಿವಿಟಿ ದರ ಶೇ 6.39 ಕ್ಕೆ ಹೆಚ್ಚಳವಾಗಿದೆ. ರಾಜ್ಯದ. ಪಾಸಿಟಿವಿಟಿ ದರ ಶೇ 14.15 % ರಷ್ಟಿದೆ

ಶಾಲೆಗಳಲ್ಲಿ ಕೋವಿಡ್-19 ಕ್ಲಸ್ಟರ್ ಪ್ರಕರಣಗಳು ಕಂಡು ಬಂದಿವೆ. ಈ ಕುರಿತು ಜ.11 ರಂದು ಜರುಗಿದ ಜಿಲ್ಲಾಮಟ್ಟದ ವಿಪತ್ತು ನಿರ್ವಹಣಾ ಸಮಿತಿ ಸಭೆಯಲ್ಲಿ ವಿವರವಾಗಿ ಚರ್ಚಿಸಿ ಕೋವಿಡ್-19 ವೈರಾಣು ಹರಡುವಿಕೆಯನ್ನು ನಿಯಂತ್ರಿಸಲು ಮುಂಜಾಗೃತಾ ಕ್ರಮವಾಗಿ ಹಾಗೂ ಮಕ್ಕಳ ಆರೋಗ್ಯ ಹಿತದೃಷ್ಟಿಯಿಂದ ಹೆಚ್ಚುವರಿಯಾಗಿ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ.

ಅದರಂತೆ ಜ.13ರಿಂದ ಮುಂದಿನ ಆದೇಶದವರೆಗೆ ಧಾರವಾಡ ನಗರ ಮತ್ತು ಗ್ರಾಮೀಣ ಹಾಗೂ ಹುಬ್ಬಳ್ಳಿ ನಗರ ಮತ್ತು ಗ್ರಾಮೀಣ ತಾಲೂಕಿನಾದ್ಯಂತ ಭೌತಿಕ ತರಗತಿಗಳು, ವಸತಿ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳನ್ನೊಳಗೊಂಡು ಎಲ್ಲಾ ಮಾಧ್ಯಮದ 1 ರಿಂದ 8ನೇ ತರಗತಿವರೆಗಿನ ಶಾಲೆಗಳನ್ನು ತೆರೆಯದಂತೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್  ಆದೇಶಿಸಿದ್ದಾರೆ.

ಈ ಅವಧಿಯಲ್ಲಿ ಆನ್‍ಲೈನ್ ಮುಖಾಂತರ ತರಗತಿಗಳನ್ನು ನಡೆಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ 188 ರ ಪ್ರಕಾರ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *