ಬೆಂಗಳೂರು prajakiran.com :
ರಾಜಭವನದಲ್ಲಿ ಸೋಮವಾರ ಬೆಳಗ್ಗೆ ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು.
ಅನಂತ ಪದ್ಮನಾಭ ಹೆಗಡೆ, ಸಿದ್ಧಯ್ಯ ರಾಚಯ್ಯ ಹಾಗೂ ಶ್ರೀಮತಿ ಕನ್ನನ್ ಕುಯಿಲ್ ಶ್ರೀಧರನ್ ಹೇಮಲೇಖಾ ಅವರು ರಾಜ್ಯದ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು.
ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು.
ಈ ಸಮಾರಂಭದಲ್ಲಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಿದ್ದರು.