ಧಾರವಾಡ prajakiran.com : ಧಾರವಾಡ ಜಿಪಂ ಸದಸ್ಯ
ಯೋಗೀಶ್ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪನಗರ ಪೊಲೀಸ್ ಠಾಣೆ ಇನ್ಸಪೆಕ್ಟರ್
ಚೆನ್ನಕೇಶವ ಟಿಂಗರಿಕರ್ ನಿರೀಕ್ಷಣಾ ಜಾಮೀನು ವಿಚಾರಣೆ
ನವೆಂಬರ್ 30ಕ್ಕೆ ಮುಂದೂಡಲಾಗಿದೆ.
ಸೋಮವಾರ ಧಾರವಾಡ ಹೈಕೋರ್ಟ್ ಏಕಸದಸ್ಯ ಪೀಠ ಈ ಮಹತ್ಚದ ಆದೇಶ ಹೊರಡಿಸಿದೆ.
ಯೋಗೀಶಗೌಡ ಹತ್ಯೆಯ ನಂತರ ತನಿಖಾಧಿಕಾರಿಯಾಗಿದ್ದ ಟಿಂಗರಿಕರ್
ಸಾಕ್ಷಿ ನಾಶ ಹಾಗೂ ಭ್ರಷ್ಟಚಾರದ ಆರೋಪ ಎದುರಿಸುತ್ತಿದ್ದಾರೆ. ಟಿಂಗರಿಕರ್ ಅವರು
ಸಿಬಿಐನಿಂದ ಬಂಧನ ಭೀತಿಯಲ್ಲಿದ್ದಾರೆ.
ಈ ಹಿನ್ನೆಲೆಯಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಚೆನ್ನಕೇಶವ
ಟಿಂಗರಿಕರ್ ಅವರು
ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು.
ಸಿಬಿಐ ಅಧಿಕಾರಿಗಳ ತಂಡ ಹೈಕೋರ್ಟ್ ಗೆ ಹಾಜರಾಗಿ ನಿರೀಕ್ಷಣಾ ಜಾಮೀನು ಅರ್ಜಿಗೆ ತಕರಾರು ಸಲ್ಲಿಸಿದರು.
ಈ ಹಿಂದೆ ಧಾರವಾಡದ ಮೂರನೇ ಅಧಿಕ ಹಾಗೂ ಸಿಬಿಐ ವಿಶೇಷ
ನ್ಯಾಯಾಲಯದಲ್ಲಿ ಟಿಂಗರಿಕರ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿತ್ತು.
ಈ ಹಿನ್ನೆಲೆಯಲ್ಲಿ ಪೊಲೀಸ್ ಇನ್ಸಪೆಕ್ಟರ್ ಚನ್ನಕೇಶವ ಟಿಂಗರಿಕರ್ ಅವರ ನ. 30 ರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯತ್ತ ಎಲ್ಲರ ಚಿತ್ತ ನೆಟ್ಟಿದ್ದು ತೀವ್ರ ಕುತೂಹಲ ಕೆರಳಿಸಿದೆ.
ಈ ಹಿಂದೆ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಧಾರವಾಡ ಜಿಲ್ಲೆಯ ಮೂರನೇ ಅಧಿಕ ಹಾಗೂ ವಿಶೇಷ ಸಿಬಿಐ ನ್ಯಾಯಾಲಯ ತಿರಸ್ಕರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.