ರಾಜ್ಯ

ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಜನವರಿ 6ಕ್ಕೆ ಮುಂದೂಡಿದ ಹೈಕೋರ್ಟ್

ಧಾರವಾಡ prajakiran.com : ಧಾರವಾಡ ಜಿಲ್ಲೆಯ ಜಿ.ಪಂ. ಸದಸ್ಯ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ ಕುಲಕರ್ಣಿ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಯನ್ನು ಧಾರವಾಡ ಹೈಕೋರ್ಟ್ ಪೀಠ ಜನವರಿ 6ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

ಹೈಕೋರ್ಟ್ ಎಕಸದಸ್ಯ ಪೀಠದ ನ್ಯಾಯಮೂರ್ತಿ ಮೊಹಮ್ಮದ್ ನಮಾಜ್ ಅವರು ಈ ಮಹತ್ವದ ಆದೇಶ ಹೊರಡಿಸಿದರು.

ಮಂಗಳವಾರ ನ್ಯಾಯಾಲಯದ ಮುಂದೆ ಹಾಜರಾದ ಸಿಬಿಐ ಪರ ವಕೀಲರು ತಕರಾರು ಅರ್ಜಿ ಸಲ್ಲಿಸಲು ಇನ್ನಷ್ಟು
ಕಾಲಾವಕಾಶ ನೀಡುವಂತೆ ಮನವಿ ಮಾಡಿದರು.

ಈ ಹಿನ್ನೆಲೆಯಲ್ಲಿ ಧಾರವಾಡ ಹೈಕೋರ್ಟ್ ಎಕಸದಸ್ಯ ಪೀಠ ಅವರ ಮನವಿಯನ್ನು ಪುರಸ್ಕರಿಸಿ ವಿಚಾರಣೆ ಮುಂದೂಡಿದರು.

ಹೀಗಾಗಿ ಮಾಜಿ ಸಚಿವ ವಿನಯ ಕುಲಕರ್ಣಿ ಇನ್ನಷ್ಟು ದಿನಗಳ ಕಾಲ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿಯೇ ಕಾಲ ಕಳೆಯಬೇಕಾಗಿದೆ.

ಈ ಹಿಂದೆ ಧಾರವಾಡ ಜಿಲ್ಲೆಯ ಮೂರನೇ ಅಧಿಕ ಹಾಗೂ ಸಿಬಿಐ ವಿಶೇಷ ನ್ಯಾಯಾಲಯ ಮಾಜಿ ಸಚಿವ ವಿನಯ ಕುಲಕರ್ಣಿ
ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದರು.

ಹೀಗಾಗಿ ಮಾಜಿ ಸಚಿವರ ಪರ ವಕೀಲರು ಹೈಕೋರ್ಟ್ ಮೆಟ್ಟಿಲು ಹತ್ತಿದ್ದನ್ನು ಇಲ್ಲಿ ಸ್ಮರಿಸಬಹುದು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *