ರಾಜ್ಯ

ಹುಬ್ಬಳ್ಳಿ-ಧಾರವಾಡ ಬೈಪಾಸ್ ಅಗಲೀಕರಣಕ್ಕೆ ಶೀಘ್ರದಲ್ಲಿಯೇ ಸಾರ್ವಜನಿಕ ಹಿತಾಸಕ್ತಿ ಅರ್ಜಿ

 ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದ ಭೀಕರ ಅಪಘಾತಕ್ಕೆ ನಂದಿ ಇನ್ಪಾಸ್ಟಕ್ಷರ್ ಕಂಪನಿ ಮಾಲೀಕ ಅಶೋಕ ಖೇಣಿ ನೇರ ಹೊಣೆ : ದೀಪಕ ಚಿಂಚೋರೆ ಆರೋಪ

ಧಾರವಾಡ prajakiran.com : ಧಾರವಾಡದ ಹೊರವಲಯದಲ್ಲಿರುವ ಇಟ್ಟಿಗಟ್ಟಿ ಕ್ರಾಸ್ ಬಳಿ ಜ.15ರಂದು ಸಂಭವಿಸಿದ ಭೀಕರ ಅಪಘಾತಕ್ಕೆ ಅದರ ಗುತ್ತಿಗೆದಾರ ಸಂಸ್ಥೆಯಾಗಿರುವ ನಂದಿ ಇನ್ಪಾಸ್ಟಕ್ಷರ್ ಕಂಪನಿ ಮಾಲೀಕ ಅಶೋಕ ಖೇಣಿ ನೇರ ಹೊಣೆಯಾಗಿದ್ದಾರೆ. ಹೀಗಾಗಿ ಅವರನ್ನು ತಕ್ಷಣ ಬಂಧಿಸಬೇಕು ಎಂದು ಎಐಸಿಸಿ ಸದಸ್ಯ ದೀಪಕ ಚಿಂಚೋರೆ ಆಗ್ರಹಿಸಿದರು.

ಅವರು ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಶೋಕ ಖೇಣಿ ಅವರಿಗೆ ಈ ರಸ್ತಯನ್ನು ನಿರ್ಮಾಣ, ನಿರ್ವಹಣೆ ಹಾಗೂ ಶುಲ್ಕ ಸಂಗ್ರಹ ಆಧಾರದ ಮೇಲೆ ನೀಡಲಾಗಿದೆ. ಹೀಗಾಗಿ ಅದಕ್ಕೆ ಅವರೇ ನೇರ ಹೊಣೆ ಹೊರಬೇಕು ಎಂದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇವಲ ಟೋಲ್ ಸಂಗ್ರಹಕ್ಕೆ ಸೀಮಿತವಾಗಿರುವ ನಂದಿ ಇನ್ಪಾಸ್ಟಕ್ಷರ್ ಕಂಪನಿ ಮಾಲೀಕ ಅಶೋಕ್ ಖೇಣಿಯವರು ಹುಬ್ಬಳ್ಳಿ-ಧಾರವಾಡ ಸುತ್ತಲಿನ 26 ಕಿಲೋ ಮೀಟರ್ ಬೈಪಾಸ್ ರಸ್ತೆಯನ್ನು ಅಗಲೀಕರಣ ಮಾಡಬೇಕು ಎಂದು ಹಲವು ವರ್ಷಗಳಿಂದ ಆಗ್ರಹಿಸುತ್ತಲೇ ಬಂದರೂ ಕೇಂದ್ರ, ರಾಜ್ಯ ಸರ್ಕಾರ ಹಾಗೂ ಜನ ಪ್ರತಿನಿಧಿಗಳಿಗೆ ಬ್ಲಾಕ್ ಮೇಲ್ ಮಾಡುತ್ತಅವರಿಗೆ ಮೋಸ ಮಾಡಿ ಹಣ ಲಪಟಾಸುತ್ತಿದ್ದಾರೆ.

ಪ್ರತಿ ತಿಂಗಳೂ ಕೋಟ್ಯಾಂತರ ರೂಪಾಯಿ ಟೋಲ್ ಸಂಗ್ರಹಿಸಿದರೂ ಬೈಪಾರ್ ಅಗಲೀಕರಣ ಮಾಡಿಲ್ಲ ಎಂದು ಕಿಡಿಕಾರಿದರು.

ಹೀಗಾಗಿ ರಾಜ್ಯ ಸರಕಾರ ತಕ್ಷಣಅವರ ಟೋಲ್ ಸಂಗ್ರಹಕ್ಕೆ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಇದರ ವಿರುದ್ದ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ. ಟೋಲ್ ಸಂಗ್ರಹಕ್ಕೆ ಬ್ರೇಕ್ ಹಾಕುವರೆಗೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೆ ಇರುವ ರಾಷ್ಟ್ರೀಯ ಹೆದ್ದಾರಿ -48 ಕ್ಕೆ ಸೇರಿಸಲು ಅಶೋಕ ಖೇಣಿ ಈ ಹಿಂದಿನಿಂದ 8ನೂರು ಕೋಟಿ ರೂಪಾಯಿ ಕೇಳಿದ್ದು ಸರಿಯಲ್ಲ.ಅಲ್ಲದೆ, ರಸ್ತೆ ನಿರ್ವಹಣೆ ಸಹ ಮಾಡುತ್ತಿಲ್ಲ

ಜಿಲ್ಲೆಯ ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆ ಕಾಣುತ್ತಿದೆ. ಹೀಗಾಗಿ ನಿನ್ನೆ ನಡೆದ ಅಪಘಾತ ಪ್ರಕರಣಕ್ಕೆ ನೇರವಾಗಿ ಅಶೋಕ ಖೇಣಿ, ಜಿಲ್ಲೆಯ ಜನಪ್ರತಿನಿಧಿಗಳೇ ಕಾರಣವಾಗಿದ್ದು ಅವರನ್ನು ಕೂಡಲೇ ಬಂಧನ ಮಾಡಿ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ವಿಷಯದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ತಕ್ಷಣ ಮಧ್ಯಪ್ರವೇಶ ಮಾಡಬೇಕು. ದೇಶದ ಜಲ್ವಂತ ಸಮಸ್ಯೆಗಳನ್ನು ಬಗೆಹರಿಸಿರುವ ಬಿಜೆಪಿ ರಾಷ್ಟ್ರೀಯ ನಾಯಕರು, ಅದರಲ್ಲೂ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಹುಬ್ಬಳ್ಳಿ-ಧಾರವಾಡ ಮಧ್ಯದ 26 ಕಿಲೋ ಮೀಟರ್ ಬೈಪಾಸ್ ಅಗಲೀಕರಣ ಸಮಸ್ಯೆಯನ್ನು ದಶಕಗಳಿಂದ ಬಗೆಹರಿಸಲು ಸಾಧ್ಯವಾಗದಿರುವುದು ನೋವಿನ ಸಂಗತಿಯಾಗಿದೆ.

ಈಗಲಾದರೂ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಕೇವಲ ಅಶ್ವಾಸನೆ ನೀಡುವುದು ಬಿಟ್ಟು ಕಾರ್ಯರೂಪಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದರು.
ಇದರಿಂದಾಗಿ ಪ್ರತಿ ನಿತ್ಯ ಅಮಾಯಕ ಜನರು ಅಪಘಾತದಲ್ಲಿ ಮೃತಪಡುತ್ತಿದ್ದಾರೆ ಜೀವ ಉಳಿಸುವ ನಿಟ್ಟಿನಲ್ಲಿ ನಮ್ಮ ಹೋರಾಟ ನಿರಂತರವಾಗಿ ಇರುತ್ತದೆ.

ಅವರ ವಿರುದ್ಧ ಶೀಘ್ರದಲ್ಲಿಯೇ ಪಿಐಎಲ್ ದಾಖಲು ಮಾಡಲಾಗುವುದು ಎಂದು ಎಐಸಿಸಿ ಸದಸ್ಯ ದೀಪಕ ಚಿಂಚೋರೆ ತಿಳಿಸಿದರು.

ಈ ಬಗ್ಗೆ ಪಕ್ಷತೀತ ಹೋರಾಟ ನಡೆಸಲಾಗುವುದು. ಪಕ್ಷ ರಾಜಕಾರಣ ಬದಿಗಿಟ್ಟು ಅಭಿವೃದ್ದಿ ಕೆಲಸಗಳಿಗೆ ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ ಎಂದು ದೀಪಕ ಚಿಂಚೋರೆ ಅಭಿಪ್ರಾಯಪಟ್ಟರು.

 

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *