ಅಂತಾರಾಷ್ಟ್ರೀಯ

ಧಾರವಾಡದ ಉಪನಗರ ಪೊಲೀಸ್ ಠಾಣೆಯ ಮೆಟ್ಟಿಲು ಹತ್ತಿದ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಗದ್ದುಗೆ ಗುದ್ದಾಟ

ಧಾರವಾಡ prajakiran.com : ಇಲ್ಲಿನ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯಲ್ಲಿ  ಕಳೆದ ದಿ.೮ ರಂದು ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡದ ಉಪನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯ ನಗರ ಶಾಖೆಯ ಆಡಳಿತಾಧಿಕಾರಿ ಎಸ್.ರಾಧಾಕೃಷ್ಣ ಅವರು ೫೦ ಕ್ಕೂ ಅಧಿಕ ಜನರ ವಿರುದ್ಧ ದೂರು ನೀಡಿದ್ದು, ಅನಧೀಕೃತವಾಗಿ ಸಭೆಯ ಆವರಣ ಪ್ರವೇಶ ಮಾಡಿ ಗದ್ದಲವುಂಟು ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಕಳೆದ ೨೦೨೦ ರ ಮೇ ತಿಂಗಳಲ್ಲಿ ಅಧಿಕಾರಕ್ಕೆ ಬಂದಿದ್ದ ಈರೇಶ ಅಂಚಟಗೇರಿ ನೇತೃತ್ವದ ಆಡಳಿತ ಮಂಡಳಿಯ ಅಧಿಕಾರಕ್ಕೆ ಧಾರವಾಡ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿತ್ತು.

ನ್ಯಾಯಾಲಯದ ಮಧ್ಯಂತರ ತಡೆಯಾಜ್ಞೆಯ ಹಿನ್ನೆಲೆಯಲ್ಲಿ ಅರ್ಜಿದಾರರು ತಡೆಯಾಜ್ಞೆಯ ಪ್ರತಿಯನ್ನು ಸಭೆಯ ಕಚೇರಿಗೆ ಸಲ್ಲಿಸಲು ಮುಂದಾಗಿದ್ದರು.

ಈ ಸಂದರ್ಭದಲ್ಲಿ ಎರಡೂ ಗುಂಪುಗಳ ಮಧ್ಯೆ ಅಧಿಕಾರದ ಗದ್ದುಗೆಗಾಗಿ ಪರಸ್ಪರ ವಾಗ್ವಾದ ನಡೆದಿತ್ತು. ನ್ಯಾಯಾಲಯದ ಆದೇಶದಂತೆ ನಡೆದುಕೊಳ್ಳುವುದು  ಬಿಟ್ಟು ಇದೀಗ ೫೦ ಕ್ಕೂ ಅಧಿಕ ಜನರ ವಿರುದ್ಧ ದೂರು ನೀಡಿರುವುದು ಪ್ರಕರಣ ಇನ್ನೊಂದು ತಿರುವು ಪಡೆದಿದೆ. 

ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯ ನಗರ ಶಾಖೆಯ ಆಡಳಿತಾಧಿಕಾರಿ ಎಸ್.ರಾಧಾಕೃಷ್ಣ ಅವರು ಈ ಕುರಿತು ಉಪನಗರ ಪೊಲೀಸ್ ಠಾಣೆಯಲ್ಲಿ ರು ದಾಖಲಿಸಿದ್ದಾರೆ.

ಅದರ ವಿರುದ್ದ ಪ್ರತಿ ದೂರು ನೀಡಲು ನೀರಲಕಟ್ಟಿ ಹಾಗೂ ಪುಡಕಲಕಟ್ಟಿ ಹಾಗೂ ಬಣದವರು ಚಿಂತನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಇದು ಎಲ್ಲಿಗೆ ಹೋಗಿ ತಲುಪುತ್ತದೆ ಎಂಬುದು ಬರುವ ದಿನಗಳಲ್ಲಿ ಕಾದು ನೋಡಬೇಕು.

ಮುಂಜಾಗ್ರತಾ ಕ್ರಮವಾಗಿ ಹುಬ್ಬಳ್ಳಿ ಧಾರವಾಡ ಅವಳಿ ನಗರ ಪೊಲೀಸರು ಹಿಂದಿ ಪ್ರಚಾರ ಸಭಾ ಮುಂಭಾಗದಲ್ಲಿ ಹಲವು ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್  ನಿಯೋಜಿಸಿದೆ.

 

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *