ಧಾರವಾಡ prajakiran. com : ಅಪರಿಚಿತ ವಾಹನವೊಂದು ಬೈಕ್ಗೆ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ಹಳಿಯಾಳ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯಾಗಿರುವ ಧಾರವಾಡದ ಶಕ್ತಿ ನಗರದ ನಿವಾಸಿ
ರೇಣುಕಾ ರಾಜ್ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ನಿನ್ನೆ ರಾತ್ರಿ ಬೈಕ್ ತೆಗೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಹಿಂಬದಿಯಿಂದ ಬಂದ ವಾಹನವೊಂದು ಡಿಕ್ಕಿ ಹೊಡೆದುಕೊಂಡು ಹೋಗಿದೆ.
ಇದರಿಂದಾಗಿ ವಿದ್ಯಾರ್ಥಿಯ ತಲೆಗೆ ಗಂಭೀರ ಸ್ವರೂಪದ ಗಾಯವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ .
ಮಾಹಿತಿ ಅರಿತು ಘಟನಾ ಸ್ಥಳಕ್ಕೆ ಧಾರವಾಡದ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.