ರಾಜ್ಯ

ರಾಜ್ಯದಲ್ಲಿ ಡ್ರಗ್ಸ್ ನಿಯಂತ್ರಣಕ್ಕಾಗಿ ಜಂಟಿ ತಂಡ

ಬೆಂಗಳೂರು prajakiran.com : ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ನಿಯಂತ್ರಣಕ್ಕಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ @CPBlr ಹಾಗೂ ಕೇಂದ್ರ ವಲಯದ ಐ ಜಿ ಇವರ ನೇತೃತ್ವದಲ್ಲಿ ಜಂಟಿ ತಂಡ ರಚನೆ  ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅವರು ಸೋಮವಾರ ಬೆಂಗಳೂರಿನಲ್ಲಿ ಹಿರಿಯ ಪೋಲಿಸ್ ಅಧಿಕಾರಿಗಳ ಸಭೆ ನಡೆಸಿ ಈ ಕುರಿತು ಸಮಗ್ರವಾಗಿ ಚರ್ಚಿಸಿದರು.

ರಾಜ್ಯದಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಹಾವಳಿ ಕುರಿತು ಗಂಭೀರವಾಗಿ ಸಮಾಲೋಚನೆ ನಡೆಸಿದಅವರು ಈಗಾಗಲೇ 1438 ಡ್ರಗ್ಸ್ ಕೇಸ್ ಗಳು ದಾಖಲಾಗಿ 1792 ಜನರನ್ನು ಬಂಧಿಸಲಾಗಿದೆ ಎಂದು ವಿವರಿಸಿದರು.

ಇದೇ ವಿದೇಶಗಳಿಂದ ಬಂದ ವಿಸಾ ಅವಧಿ ಮುಗಿದ ಮೇಲು ಭಾರತದಲ್ಲಿಯೇ ಉಳಿದ ವಿದೇಶಿಗರನ್ನು ಪತ್ತೆ ಮಾಡಿ ಅವರ ವಿರುದ್ದ ಪ್ರಕರಣ ದಾಖಲಿಸುವ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಲ್ಲದೆ,  ಕಾಲೇಜ್ ಗಳು ಪ್ರಾರಂಭವಾದ ತಕ್ಷಣ ಪ್ರಮುಖ ಸಂಘಟನೆಯೊಂದಿಗೆ ಸೇರಿ ಡ್ರಗ್ಸ್ ವಿರುಧ್ಧ ಜಾಗೃತಿ ಕಾರ್ಯಕ್ರಮ ನಡೆಸಬೇಕು ಎಂದು ಸಲಹೆ ನೀಡಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *