amit sha and bsy
ಅಂತಾರಾಷ್ಟ್ರೀಯ

ಕೇಂದ್ರ ಗೃಹಸಚಿವ ಅಮಿತ್ ಶಾ, ಸಿಎಂ ಬಿ.ಎಸ್. ಯಡಿಯೂರಪ್ಪಗೂ ಕರೋನಾ

ನವದೆಹಲಿ/ ಬೆಂಗಳೂರು prajakiran.com : ದೇಶದ್ಯಾಂತ ಕರೋನಾ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದೆ. ಅದರಲ್ಲೂ ದೇಶದ ಗಣ್ಯಾತೀ ಗಣ್ಯರನ್ನು ಕೂಡ ಬಿಡುತ್ತಿಲ್ಲ. ಬಾಲಿವುಡ್ ನಟಅಮಿತಾಬ ಬಚ್ಚನ್, ಅಭಿಷೇಕ್ ಬಚ್ಚನ್ ಸೊಸೆ ಐಶ್ವರ್ಯ ರೈ ಬಚ್ಚನ್ ನಂತರ ಇದೀಗ ಕೇಂದ್ರ ಗೃಹ ಸಚಿವಅಮಿತ್ ಶಾ ಹಾಗೂ ರಾಜ್ಯದ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ವ್ಯಾಪಿಸಿದೆ.

ಕೇಂದ್ರ ಗೃಹ ಸಚಿವಅಮಿತ್ ಶಾ ಅವರಿಗೆ ಕರೋನಾ ಪಾಸಿಟಿವ್ ಇರುವುದು ದೃಢಪಟ್ಟ ಬೆನ್ನಲ್ಲೇ ಅವರು ನವದೆಹಲಿಯ ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೀಗಾಗಿ ಅವರು ಇದೀಗ ಆಗಸ್ಟ್ 5ರಂದು ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮದಿಂದ ದೂರ ಉಳಿಯುವಂತಾಗಿದೆ.

ಅದೇ ರೀತಿ ಸಿಎಂ ಬಿ.ಎಸ್. ಯಡಿಯೂರಪ್ಪಅವರಿಗೂ ಕರೋನಾ ಪಾಸಿಟಿವ್ ಇರುವುದು ಖಚಿತಗೊಂಡಿದ್ದು, ಅವರು ಬೆಂಗಳೂರಿನ ಹಳೆ ವಿಮಾನ ನಿಲ್ದಾಣದ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆ ಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಿ ಎಸ್ ವೈ ‘ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ‘

ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಅವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ, ಮಾಜಿ ಸಚಿವ ಎಸ್ಆರ್ ಪಾಟೀಲ್ ಸೇರಿದಂತೆ ಮಂತ್ರಿ ಮಂಡಳದ ಎಲ್ಲಾ ಸಚಿವರು, ಶಾಸಕರು ಶುಭ ಹಾರೈಸಿದ್ದಾರೆ.

ಅವರ ಟ್ವೀಟ್ ಹೀಗಿದೆ.

ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ರವರಿಗೆ ಕೊರೋನ ಸೋಂಕು ದೃಢಪಟ್ಟಿದೆ. ಆದಷ್ಟು ಬೇಗ ಸೋಂಕಿನಿಂದ ಗುಣಮುಖರಾಗಿ ಮತ್ತೆ ಅಭಿವೃದ್ಧಿ ಕಾರ್ಯಗಳಲ್ಲಿ ಪಾಲ್ಗೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ

ಶ್ರೀ ಯಡಿಯೂರಪ್ಪನವರೇ, ಕೊರೋನಾ ಸೋಂಕಿಗೆ ನೀವು ಒಳಗಾಗಿರುವುದು ಬೇಸರದ ವಿಚಾರ. ನೀವು ಶೀಘ್ರವೇ ಗುಣಮುಖರಾಗಿ ಎಂದು ಹಾರೈಸುತ್ತೇನೆ.

 ಈ ವಿಷಯ ಆಘಾತವನ್ನುಂಟು ಮಾಡಿದ್ದು ಸತತವಾಗಿ ಕರೋನ ನಿಯಂತ್ರಣಕ್ಕೆ ಸಭೆಗಳನ್ನು ನಡೆಸಿ ದಣಿವರಿಯದೆ ರಾಜ್ಯದ ಏಳಿಗೆಗಾಗಿ ಶ್ರಮಿಸುತ್ತಿದ್ದಿರಿ, ತಾವು ಆದಷ್ಟು ಬೇಗ ಗುಣಮುಖರಾಗಿ ಎಂದಿನಂತೆ ಕರ್ತವ್ಯದಲ್ಲಿ ತೊಡಗಿಕೊಳ್ಳಲಿದ್ದೀರಿ ಎಂದು ಆಶಿಸುತ್ತೇನೆ. #GetWellSoonBSY

I have tested positive for coronavirus. Whilst I am fine, I am being hospitalised as a precaution on the recommendation of doctors. I request those who have come in contact with me recently to be observant and exercise self quarantine ಎಂದು ಟ್ವೀಟ್ ಗಳ ಸುರಿಮಳೆಯಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *