ರಾಜ್ಯ

ಪೊಲೀಸ್ ಠಾಣೆಗಳು ಸೆಟ್ಲಮೆಂಟ್ ಅಡ್ಡೆಗಳಲ್ಲ ಎಂದ ಗೃಹ ಸಚಿವ

ಚಿತ್ರದುರ್ಗ prajakiran.com : ಬರುವ ದಿನಗಳಲ್ಲಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿಯೇ ಅಧಿಕಾರಿಗಳ ಪ್ರಗತಿ ಪರಿಶೀಲನೆ ನಡೆಸಲಾಗುವುದು.

ಈ ವೇಳೆ ಕರ್ತವ್ಯದಲ್ಲಿ ಲೋಪ ಕಂಡು ಬಂದರೆ ಯಾವುದೇ ಕಾರಣಕ್ಕೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಕಾನೂನು ಮೀರಿದರೆ ಯಾರನ್ನು ಸಹಿಸಲಾಗದು, ಅವರನ್ನು ರಕ್ಷಿಸಲು ಸಾಧ್ಯವಿಲ್ಲ ಎಂದಅವರು ಪೊಲೀಸ್ ಠಾಣೆಗಳು ಸೆಟ್ಲಮೆಂಟ್ ಅಡ್ಡೆಗಳಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.




ಬಹುತೇಕ ಸಿವಿಲ್ ಪ್ರಕರಣಗಳು ಹಾಗೂ ಸಣ್ಣ ಪುಟ್ಟ ಪ್ರಕರಣಗಳು ಹೆಚ್ಚಾಗಿ ಪೊಲೀಸ್ ಠಾಣೆಗಳಲ್ಲಿ ಅದು ಪೊಲೀಸರ ಮಧ್ಯಸ್ಥಿಕೆಯಲ್ಲಿಯೇ ಸೆಟ್ಲಮೆಂಟ್ ಆಗುತ್ತಿವೆ.  ಇಂತಹ ಪ್ರಕರಣಗಳಲ್ಲಿ ಪೊಲೀಸರಿಗೆ ಮಧ್ಯಪ್ರವೇಶಕ್ಕೆ ಯಾವುದೇ ಅವಕಾಶವಿಲ್ಲ ಎಂದರು.

ಪೊಲೀಸರು ಪ್ರಕರಣಗಳಲ್ಲಿ ಮಧ್ಯಸ್ಥಿಕೆ ವಹಿಸುವ ಮೂಲಕ ಅವರ ಎಜೆಂಟ್ ಗಳಾಗಬಾರದು ಎಂದ ಅವರು ಸಿವಿಲ್ ಪ್ರಕರಣಗಳನ್ನುನ್ಯಾಯಾಲಯ ಮೂಲಕ ಮಾತ್ರ ಇತ್ಯರ್ಥ ಮಾಡಿಕೊಳ್ಳಬೇಕಷ್ಟೇ ಎಂದು ಹೇಳಿದರು.

ಪೊಲೀಸ್ ಅಧಿಕಾರಿಗಳು ಇಂತಹ ಪ್ರಕರಣಗಳಲ್ಲಿ ಭಾಗಿಯಾಗಬಾರದು. ಭಾಗಿಯಾದರೆ ಅವರು ಶಿಸ್ತು ಕ್ರಮ ಎದುರಿಸಬೇಕಾಗುತ್ತದೆಎಂದು ಬೊಮ್ಮಾಯಿ ಎಚ್ಚರಿಸಿದ್ದಾರೆ.



PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *