ರಾಜ್ಯ

ಹೊರ ರಾಜ್ಯಗಳಿಂದ ಬರುವ ಎಲ್ಲರಿಗೂ ಸರ್ಕಾರಿ ಕ್ವಾರಂಟೈನ್

ಧಾರವಾಡ prajakiran.com : ಅತಿಹೆಚ್ಚು ಪ್ರಕರಣಗಳನ್ನು ಹೊಂದಿರುವ ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ್, ತಮಿಳುನಾಡು ಹಾಗೂ ದೆಹಲಿ ರಾಜ್ಯಗಳಿಂದ ಬರುವ ಎಲ್ಲರನ್ನೂ ಸರ್ಕಾರಿ ಕ್ವಾರಂಟೈನ್ ಗೆ ಒಳಪಡಿಸಲಾಗುವುದು ಎಂದು ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದರು.

ಹೊರರಾಜ್ಯಗಳಿಂದ ಬರುವ ಜನರಿಗೆ ಎಲ್ಲರನ್ನೂ ಕೃಷಿ ವಿ.ವಿ.ಆವರಣದಲ್ಲಿ ತಪಾಸಣೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರಠಾಣಿ ಮಾತನಾಡಿ, ಸದ್ಯ ಕಿಮ್ಸ್ ಹೊರರೋಗಿ ವಿಭಾಗದಲ್ಲಿ ೮೦೦, ಒಳರೋಗಿ  ೫೦೦ ಜನ ಚಿಕಿತ್ಸೆ ಪಡೆಯುತ್ತಿದ್ದಾರೆ, ತುರ್ತು ಚಿಕಿತ್ಸಾ ಘಟಕದಲ್ಲಿಯೂ ರೋಗಿಗಳಿದ್ದಾರೆ.

ಕೋವಿಡ್ ಪ್ರಯೋಗಾಲಯದಲ್ಲಿ ಪ್ರತಿನಿತ್ಯ ಸುಮಾರು ೨೫೦ ಕ್ಕೂ ಹೆಚ್ಚು ವರದಿಗಳು ಸಿದ್ಧವಾಗುತ್ತಿವೆ.

ರಾಜ್ಯದಲ್ಲಿಯೇ ಮೊದಲ ಬಾರಿಗೆ ಪ್ರಾಯೋಗಿಕ ಪ್ಲಾಸ್ಮಾ ಥೆರಪಿ ಕೈಗೊಳ್ಳಲು  ಐಸಿಎಂ ಆರ್ ನಿಂದ ಕಿಮ್ಸ್ ಗೆ ಅನುಮೋದನೆ ದೊರೆತಿದೆ ಎಂದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *