ಅಪರಾಧ

ಧಾರವಾಡದ ಅಪಾರ್ಟ್ಮೆಂಟ್ ವೊಂದರ ಮನೆಯಲ್ಲಿ ಕಳ್ಳತನ

ಧಾರವಾಡ prajakiran.com : ಅಪಾರ್ಟ್ಮೆಂಟ್ ವೊಂದರಲ್ಲಿರುವ ಮನೆಯಲ್ಲಿ ಕಳ್ಳತನ ನಡೆದ ಘಟನೆ ಧಾರವಾಡದಲ್ಲಿ ಮಂಗಳವಾರ ನಡೆದಿದೆ.

ನಗರದ ಕವಿವಿ ರಸ್ತೆಯಲ್ಲಿರುವ ರಂಕಾ ಸ್ಟೆಲೋ ಅಪಾರ್ಟ್ಮೆಂಟ್ ನ ಮನೆಯಲ್ಲಿ ಕಳ್ಳತನವಾಗಿದ್ದು, ಅಪಾರ್ಟ್ಮೆಂಟ್‌ ನ ಮನೆಯಲ್ಲಿ ಯಾರೂ ಇಲ್ಲದಾಗ ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ.

ರೈಲ್ವೆ ಇಲಾಖೆ ಅಧಿಕಾರಿ ರಂಜನ್ ಝಾ ಅವರ ಮನೆಯಲ್ಲಿಯೇ ಈ ಕೃತ್ಯ ನಡೆದಿದ್ದು, ಮನೆ ಬಾಗಿಲು ಮುರಿದು ಮನೆಯಲ್ಲಿದ್ದ ಚಿನ್ನಾಭರಣ ಹಾಗೂ 5.50 ಲಕ್ಷ ರೂ.‌ ಮೌಲ್ಯದ 110 ಗ್ರಾಂ ಚಿನ್ನ ಕದ್ದು ಪರಾರಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಧಾರವಾಡ ಉಪನಗರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *