ರಾಜ್ಯ

ಗಾಯಾಳುಗಳಿಗೆ ತುರ್ತು ಚಿಕಿತ್ಸೆಗೆ ವ್ಯವಸ್ಥೆ- ಮಾನವೀಯತೆ ಮೆರೆದ ವಿಧಾನ ಪರಿಷತ್ ಸಭಾಪತಿ

ಚಿತ್ರದುರ್ಗ prajakiran.com :
ಕಾರು ಹಾಗೂ ದ್ವಿಚಕ್ರ ವಾಹನಗಳ ಮಧ್ಯೆ ಸನಿವಾರ ಬೆಳಿಗ್ಗೆ 10 ಗಂಟೆ ವೇಳೆಗೆ ಚಿತ್ರದುರ್ಗ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿನ ಸಿರಿಗೆರೆ ಬಳಿ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಬಾಲಕ ಸೇರಿದಂತೆ ದಂಪತಿಯನ್ನು ಕೂಡಲೇ ಅಸ್ಪತ್ರೆಗೆ ಸಾಗಿಸಿ ಅವರ ಜೀವ ಉಳಿಸುವಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾನವೀಯತೆ ಮೆರೆದಿದ್ದಾರೆ.

ಕಚೇರಿ ಕಾರ್ಯ ಕಲಾಪ ಮುಗಿಸಿ ಹುಬ್ಬಳ್ಳಿಯ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬೆಂಗಳೂರಿನಿಂದ ತೆರಳುತ್ತಿದ್ದ ಸಭಾಪತಿ ಬಸವರಾಜ ಹೊರಟ್ಟಿಯವರು ಮಾರ್ಗಮಧ್ಯದಲ್ಲಿ ಸಿರೆಗೆರೆ ಬಳಿ ತಮ್ಮ ಕಣ್ಣೆದುರಿಗೆ ಸಂಭವಿಸಿದ ಅಪಘಾತ ಗಮನಿಸಿ ಕೂಡಲೇ ತಮ್ಮ ವಾಹನ ನಿಲ್ಲಿಸಿ ಗಾಯಾಳುಗಳಿಗೆ ತಕ್ಷಣವೇ ಪ್ರಥಮ ಚಿಕಿತ್ಸೆ ನೀಡಲು ಸಹಕರಿಸಿದರು.

ಅಲ್ಲದೇ ಸ್ಥಳೀಯ ಪೊಲೀಸರಿಗೆ ಕರೆ ಮಾಡಿ ಬೇಗನೆ ಸ್ಥಳಕ್ಕೆ ಆಗಮಿಸುವಂತೆ ಸೂಚಿಸಿದರು ಹಾಗೂ ಆಂಬುಲೆನ್ಸಗೆ ಕರೆಮಾಡಿ ಮೂವರು ಗಾಯಾಳುಗಳನ್ನು ಶೀಘ್ರದಲ್ಲಿಯೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವಲ್ಲಿ ನೆರವಾದರು.

ಸುಮಾರು ಅರ್ಧ ಗಂಟೆಗಿಂತಲೂ ಹೆಚ್ಚು ಕಾಲ ಅಪಘಾತ ಸ್ಥಳದಲ್ಲಿಯೇ ಇದ್ದು ಗಾಯಾಳುಗಳಿಗೆ ಧೈರ್ಯ ಹೇಳಿ ಅವರಿಗೆ ತುರ್ತು ಚಿಕಿತ್ಸೆ ದೊರಕಿಸುವಲ್ಲಿ ಶ್ರಮಿಸಿದರು.

ಸಭಾಪತಿ ಬಸವರಾಜ ಹೊರಟ್ಟಿಯವರು ಸಂವಿಧಾನಿಕ ದೊಡ್ಡ ಹುದ್ದೆಯಲ್ಲಿದ್ದರೂ ಜನಸಾಮಾನ್ಯರ ಕಷ್ಟಗಳಿಗೆ ಕೂಡಲೇ ಪ್ರತಿಸ್ಪಂದಿಸಿ ನೆರವಾಗುವ ಮಾನವೀಯ ಗುಣ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದ್ದು ಇಂದಿನ ಯುವ ರಾಜಕಾರಣಿಗಳಿಗೆ ಮಾದರಿಯಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *