ರಾಜ್ಯ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ಬಸವರಾಜ ಹೊರಟ್ಟಿ

ಬೆಂಗಳೂರು prajakiran.com : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ವಿಧಾನಪರಿಷತ್ತಿನ ಮಾಜಿ ಹಿರಿಯ ಸದಸ್ಯ ಹಾಗೂ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.

ಈ ಬಾರಿ ವಿಧಾನ ಪರಿಷತ್ ಚುನಾವಣೆಯಲ್ಲಿ  ಬಸವರಾಜ ಹೊರಟ್ಟಿ ಬಿಜೆಪಿ ಅಭ್ಯರ್ಥಿ ಯಾಗಿ ಅಖಾಡಕ್ಕೆ ಇಳಿಯಲಿದ್ದಾರೆ. ಹೀಗಾಗಿ ಅವರು ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದಾರೆ.

ಇದರಿಂದಾಗಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮೋಹನ ಲಿಂಬಿಕಾಯಿ ಮುಂದಿನ‌ನಡೆ ತೀವ್ರ ಕುತೂಹಲ ಕೆರಳಿಸಿದೆ.

ಈ ಸಂದರ್ಭದಲ್ಲಿ ಮಾಜಿ ಸಿಎಂ ಸಿಎಂ ಜಗದೀಶ್ ಶೆಟ್ಟರ್, ಸಚಿವರಾದ ಗೋವಿಂದ ಕಾರಜೋಳ, ಸಿಸಿ ಪಾಟೀಲ್, ಆರ್ ಅಶೋಕ್, ಅರಗ ಜ್ಞಾನೆಂದ್ರ , ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ, ಶಾಸಕರಾದ ಸಿದ್ದು ಸವದಿ, ಕಳಕಪ್ಪ ಬಂಡಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ರಾಜಣ್ಣ ಕೊರವಿ ಮತ್ತು ಇತರರು ಉಪಸ್ಥಿತರಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *