ಚೆನ್ನೈ prajakiran.com : ತಮಿಳು ನಟ ಹಾಗೂ ಡಿಎಂಡಿಕೆ ಪಕ್ಷದ ಮುಖ್ಯಸ್ಥ ವಿಜಯಕಾಂತ್ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಚೆನ್ನೈ ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇಂದು ಬೆಳಗ್ಗೆ 3 ಗಂಟೆ ವೇಳೆಗೆ ವಿಜಯಕಾಂತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಳೆದ ಕೆಲವು ವರ್ಷಗಳಿಂದ ಹಲವು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ.
ವೈದ್ಯರ ತಂಡ ವಿಜಯಕಾಂತ್ ಅವರ ಆರೋಗ್ಯದ ಮೇಲ್ವಿಚಾರಣೆ ಮಾಡುತ್ತಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ಡಿಎಂಡಿಕೆ ಪಕ್ಷ ತಿಳಿಸಿದೆ.