ರಾಜ್ಯ

ಹುಬ್ಬಳ್ಳಿ ಬಿ.ಆರ್.ಟಿ.ಎಸ್. ನಲ್ಲಿ ಕೋವಿಡ್ ಟೆಸ್ಟ್ : ಇಬ್ಬರಿಗೆ ಪಾಸಿಟಿವ್

ಹುಬ್ಬಳ್ಳಿ prajakiran.com : ವಾ ಕ ರ ಸಾ ಸಂಸ್ಥೆಯ ಹುಬ್ಬಳ್ಳಿ ಧಾರವಾಡ ನಗರ ಸಾರಿಗೆ ವಿಭಾಗದ ಹುಬ್ಬಳ್ಳಿ ಬಿ.ಆರ್. ಟಿ. ಎಸ್. ಘಟಕದಲ್ಲಿ ಆ. 29 ರಂದು ಧಾರವಾಡ ಜಿಲ್ಲಾಡಳಿತದ ನಿರ್ದೇಶನದಂತೆ ಹುಬ್ಬಳ್ಳಿ ತಾಲೂಕು ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ  ಘಟಕದ 65 ಆಡಳಿತ, ತಾಂತ್ರಿಕ & ಚಾಲನಾ ಸಿಬ್ಬಂದಿಗಳ ಕೋವಿಡ್ ಟೆಸ್ಟ್ ಮಾಡಲಾಯಿತು.

ಅದರಲ್ಲಿ ಇಬ್ಬರು ಸಿಬ್ಬಂದಿಗಳಿಗೆ ಪಾಸಿಟಿವ್ ಪ್ರಕರಣಗಳು ಇರುವುದು ಕಂಡುಬಂದಿದೆ. ಇದು ಕರೋನಾ  ರೋಗ  ಹರಡದಂತೆ ನಿಯಂತ್ರಿಸಲು ಸಹಕಾರಿಯಾಗಿದೆ ಎಂದು

ಹುಬ್ಬಳ್ಳಿ ಧಾರವಾಡ ನಗರ ಸಾರಿಗೆ ವಿಭಾಗದ ವಿಭಾಗೀಯ ನಿಯತ್ರಣಾಧಿಕಾರಿ ವಿವೇಕಾನಂದ ವಿಶ್ವಜ್ಞ ತಿಳಿಸಿದ್ದಾರೆ.

ವೈದ್ಯರಾದ ಆರ್. ಎಸ್. ಹಿತ್ತಲಮನಿ ಹಾಗೂ ಪಿ. ಎನ್.ಬಿರಾದಾರ ಅವರ ಮೇಲ್ವಿಚಾರಣೆಯಲ್ಲಿ ತಪಾಸಣೆ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಘಟಕ ವ್ಯವಸ್ಥಾಪಕರಾದ ದೀಪಕ ಹಾಗೂ ಕಾರ್ಮಿಕ ಕಲ್ಯಾಣಾಧಿಕಾರಿ ರಾಜೇಂದ್ರ ಸಾಥ್ ನೀಡಿದರು.  

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *