ಜಿಲ್ಲೆ

ಹುಬ್ಬಳ್ಳಿಯಲ್ಲಿ ಮತ್ತೊಂದು ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆ

ಧಾರವಾಡ : ಧಾರವಾಡ ಜಿಲ್ಲೆಯ ಹುಬ್ಬಳ್ಳಿಯಲ್ಲಿ ಶುಕ್ರವಾರ ಮತ್ತೊಂದು ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.

ಕೆಮ್ಮು,ನೆಗಡಿ ಹಾಗೂ ಜ್ವರದಿಂದ ಬಳಲುತ್ತಿದ್ದ  ಹುಬ್ಬಳ್ಳಿಯ ಶಾಂತಿನಗರದ 57 ವರ್ಷದ ವ್ಯಕ್ತಿಯೊಬ್ಬರಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ .

ಇದು ಧಾರವಾಡ ಜಿಲ್ಲೆಯ 10 ನೇ ಪ್ರಕರಣವಾಗಿದೆ. ಈಗಾಗಲೇ ಇಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಎಂಟು ಜನ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋವಿಡ್ 19 ಪ್ರಕರಣ ದೃಢ ಪಟ್ಟ ಬೆನ್ನಲ್ಲೇ ಹುಬ್ಬಳ್ಳಿಯ ಜನತೆ ಮತ್ತೇ ಆತಂಕಗೊಂಡಿದ್ದು, ಜಿಲ್ಲೆಯ ಜನತೆ ಬೆಚ್ಚಿ ಬಿದ್ದಿದೆ.

ಕರೋನಾ ಖಚಿತಗೊಂಡ ಹಿನ್ನಲೆಯಲ್ಲಿ ಹುಬ್ಬಳ್ಳಿಯ ಶಾಂತಿನಗರವನ್ನು ನಿರ್ಬಂಧಿತ ಪ್ರದೇಶವನ್ನಾಗಿ ಘೋಷಿಸಿ, ಅಲ್ಲಿಗೆ ಒಳ ಹೋಗುವುದನ್ನು ಹಾಗೂ ಹೊರ ಬರುವುದನ್ನು ನಿಷೇಧಿಸಲಾಗಿದೆ.

ಹುಬ್ಬಳ್ಳಿಯ ಶಾಂತಿನಗರ ಜನತೆ ಸಹಕರಿಸಬೇಕು. ಲಾಕ್ ಡೌನ್ ಹಾಗೂ ನಿಷೇಧಾಜ್ಞೆಯನ್ನು ಉಲ್ಲಂಘಿಸಿ ಜನತೆ ಅನಗತ್ಯವಾಗಿ ಸಂಚರಿಸಬಾರದು ಎಂದು ಧಾರವಾಡ ಜಿಲ್ಲಾಡಳಿತ ಮನವಿ ಮಾಡಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *