ರಾಜ್ಯ

ಹುಬ್ಬಳ್ಳಿ-ಧಾರವಾಡ ಮಾಜಿ ಮೇಯರ್, ಮಾಜಿ ಸದಸ್ಯನಿಗೂ ಕರೊನಾ….!




ಹುಬ್ಬಳ್ಳಿ prajakiran.com : ಧಾರವಾಡ ಜಿಲ್ಲೆಯಾದ್ಯಂತ ಕರೋನಾಅಟ್ಟಹಾಸ ಮುಂದುವರೆದಿದ್ದು, ರಾಜಕೀಯ ಮುಖಂಡರಿಗೂ ಅದರ ಬಿಸಿ ತಾಕಲು ಆರಂಭವಾಗಿದೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಬಿಜೆಪಿಯ ಮುಖಂಡರು ಆಗಿರುವ ಮಾಜಿ ಮಹಾಪೌರ ಹಾಗೂ ಮಾಜಿಸದಸ್ಯರೊಬ್ಬರಿಗೆ ಕರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

52 ವರ್ಷದ ಮಾಜಿ ಮೇಯರ್ ಹುಬ್ಬಳ್ಳಿಯ ಸಿಬಿಟಿ ಬಳಿ ನಿವಾಸಿಯಾಗಿರುವ ಅವರು ಕಳೆದ ಬಿಜೆಪಿ ಅವಧಿಯಲ್ಲಿ ಮಹಾಪೌರರಾಗಿದ್ದರು.



ಇನ್ನೂ ಎರಡು ದಿನಗಳ ಹಿಂದಷ್ಟೇ ಮಹಾನಗರ ಪಾಲಿಕೆಯ ಬಿಜೆಪಿಯ ಮಾಜಿ ಸದಸ್ಯರೊಬ್ಬರಲ್ಲಿ ಕರೊನಾ ದೃಢಪಟ್ಟಿತ್ತು.

ಈ ಹಿನ್ನಲೆಯಲ್ಲಿ ಇಬ್ಬರಿಗೂ ಕೋವಿಡ್ ನಿಯೋಜಿತ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.



ಅಲ್ಲದೆ, ಈ ಇಬ್ಬರು ಬಿಜೆಪಿ ಮುಖಂಡರ ಪ್ರಾಥಮಿಕಸಂಪರ್ಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಆರೋಗ್ಯ ಇಲಾಖೆ ಸಿಬ್ಬಂದಿ ಪತ್ತೆಹಚ್ಚಿ ಅವರನ್ನು ಹೋಂ ಕ್ವಾರಂಟಿನ್ ಹಾಗೂ ಗಂಟಲು ತಪಾಸಣೆ ನಡೆಸಲು ಮುಂದಾಗಿದೆ ಎಂದು ಗೊತ್ತಾಗಿದೆ.

ಇದರಿಂದಾಗಿ ಹುಬ್ಬಳ್ಳಿ-ಧಾರವಾಡ ಮಹಾನಗರದ ಬಿಜೆಪಿ ಮುಖಂಡರಿಗೂ ಎಲ್ಲಿ ತಮಗೂ ಕರೋನಾ ವಕ್ಕರಿಸುತ್ತಾ ಎಂಬ ಢವ ಢವ ಶುರು ಶುರು ಆಗಿರುವುದು ಸುಳ್ಳಲ್ಲ.



PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *