ಹುಬ್ಬಳ್ಳಿ prajakiran.com : ಹುಬ್ಬಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಪುತ್ರ ಸೂರಜ್ (18) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿರುವ ತಮ್ಮ ಮನೆಯಲ್ಲಿಯೇ ಸೂರಜ್ ತನ್ನ ಕೋಣೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು ನಿಖರವಾಗಿ ತಿಳಿದುಬಂದಿಲ್ಲ.
ಸದಾ ಲವಲವಿಕೆಯಿಂದ ಓಡಾಡಿಕೊಂಡಿದ್ದ ಸೂರಜ್ ಸಾವು ಕುಟುಂಬಸ್ಥರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ.ಅವರ ಆಕ್ರಂದನ ಮುಗಿಲು ಮುಟ್ಟಿದೆ.
ಮಂಗಳವಾರ ಬೆಳ್ಳಂಬೆಳಗ್ಗೆ ಈ ಘಟನೆ ನಡೆದಿದ್ದು, ಬಿಜೆಪಿ ಮುಖಂಡರಿಗೆ ಹಾಗೂ ಸ್ಥಳೀಯರಿಗೆ ಆಘಾತ ಮೂಡಿಸಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಉಪನಗರ ಪೊಲೀಸರು ದೌಡಾಯಿಸಿದ್ದಾರೆ.