ಅಪರಾಧ

ಹುಬ್ಬಳ್ಳಿ ಪೊಲೀಸರ ಬಲೆಗೆ ಬಿದ್ದ ಇಬ್ಬರು ಚಾಲಕಿ ಕಳ್ಳರು

ಹುಬ್ಬಳ್ಳಿ prajakiran.com : ಗ್ರಾಹಕರ ಸೋಗಿನಲ್ಲಿ ಪ್ರತಿಷ್ಠಿತ ಚಿನ್ನದ ಮಳಿಗೆಗಳಿಗೆ ಭೇಟಿ ನೀಡಿ, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭವರಣಗಳನ್ನು ಎಗರಿಸುತ್ತಿದ್ದ ಇಬ್ಬರು ಚಾಲಕಿ ಕಳ್ಳರನ್ನ ಹುಬ್ಬಳ್ಳಿಯ ಶಹರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಧಾರವಾಡದ ವಿರಕ್ತಾನ ಕಟಗಿ ಹಾಗೂ ಗದಗನ ಶರತ ಶ್ರೀಕಾಂತ ಕಾರಂತ ಎಂದು ಗುರುತಿಸಲಾಗಿದ್ದು, ಬಂಧಿತರಿಂದ 3.98 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತ ಮಾಡಲಾಗಿದೆ.

ಮೂರು ದಿನದ ಹಿಂದೆ ಈ ಇಬ್ಬರು ಹುಬ್ಬಳ್ಳಿಯ ಕೊಪ್ಪಿಕರ್ ರಸ್ತೆಯ ಕಲ್ಯಾಣ ಜುವೇಲರ್ಸಗೆ ಭೇಟಿ ನೀಡಿದ್ದರು.

ಮುಖಕ್ಕೆಮಾಸ್ಕ್ ಧರಿಸಿ ಗ್ರಾಹಕರ ಸೋಗಿನಲ್ಲಿ ಜ್ಯುವೇಲರ್ಸ್ ಗೆ ಬಂದ ಇಬ್ಬರು ಮೂರು ಲಕ್ಷ ತೊಂಬತ್ತೆಂಟು ಸಾವಿರ ಮೌಲ್ಯದ ಆಭರಣಗಳನ್ನು ಎಗರಿಸಿ ಪರಾರಿಯಾಗಿದ್ದರು.

ಈ ಬಗ್ಗೆ ದೂರು ದಾಖಲಿಸಿಕೊಂಡಿದ್ದ ಹುಬ್ಬಳ್ಳಿಯ ಶಹರ ಠಾಣೆ ಪೊಲೀಸರು ತಕ್ಷಣವೇ ಕಾರ್ಯಪೃವತ್ತರಾಗಿ ಇಬ್ಬರು ಚಾಲಕಿ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಳ್ಳತನದ ದೃಶ್ಯಗಳು ಜ್ಯುವೇಲರ್ಸ್ನಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಕುರಿತು ಹುಬ್ಬಳ್ಳಿ ಶಹರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *