ಅಪರಾಧ

ಹುಬ್ಬಳ್ಳಿಯಲ್ಲಿ ರಸ್ತೆ ವಿಭಜಕಕ್ಕೆ ಗುದ್ದಿದ ಲಾರಿ : ತಪ್ಪಿದ ಬಾರಿ ಅನಾಹುತ….!

ಹುಬ್ಬಳ್ಳಿ prajakiran.com : ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ವೊಂದು ರಸ್ತೆ ವಿಭಜಕಕ್ಕೆ ಗುದ್ದಿದ ಘಟನೆ ನಗರದ ಗೋಕುಲ ರಸ್ತೆಯಲ್ಲಿ ನಡೆದಿದೆ.

ಹೊಸಪೇಟೆಯಿಂದ ಗೋವಾಗೆ ಸ್ಪಂಜ್ ತುಂಬಿಕೊಂಡು
ಹೊರಟಿದ್ದ ಟ್ರಕ್ ರಸ್ತೆ ಮಧ್ಯೆ ಬಂದ ಬೈಕ್ ಸವಾರನನ್ನು ತಪ್ಪಿಸಲು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದಾನೆ. ‌

ಇದರಿಂದಾಗಿ ಭಾರಿ ದುರಂತವೊಂದು ತಪ್ಪಿದಂತಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಸಿಬ್ಬಂದಿ ಪರಿಶೀಲನೆ ನಡೆಸಿ ಟ್ರಕ್ ಹೊರೆ ತೆಗೆಯುವ ಕಾರ್ಯ ನಡೆಸಿದರು.

ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ.

ಈ ಕುರಿತು ಗೋಕುಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *