ಹುಬ್ಬಳ್ಳಿ ಪ್ರಜಾಕಿರಣ.ಕಾಮ್ : ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ ಘಟನೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿಯ ನೇಕಾರನಗರದ
ನಾಗರಾಜ ಚಲವಾದಿ ಎಂಬ ಯುವಕನನ್ನು ಆಟೋದಲ್ಲಿ ಬಂದಿದ್ದ ನಾಲ್ಕೈದು ಜನರ ಗುಂಪೊಂದು ಕಣ್ಣಿಗೆ ಕಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ
ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಇದೇ ವೇಳೆ ನಾಗರಾಜ ಜೊತೆಗಿದ್ದ ಇನ್ನೊಬ್ಬನ ಮೇಲೆಯೂ ಕೂಡ ಹಲ್ಲೆಗೆ ಮುಂದಾದಾಗ ಆತ ಅಲ್ಲಿಂದ ತಪ್ಪಿಸಿಕೊಂಡು ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.
ಘಟನೆಯ ಮಾಹಿತಿಯನ್ನು ತಿಳಿಯುತ್ತಿದ್ದ ಹಾಗೆ ಹುಬ್ಬಳ್ಳಿಯ ಕಸಬಾಪೇಟ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ಕ್ರಮ ಜರುಗಿಸಿದ್ದಾರೆ.