ಇಂದೋರ್ Prajakiran.com : ಕೊರೋನಾ ಸೋಂಕು ತಗುಲಿ ಪತಿ ಸಾವನ್ನಪ್ಪಿದ ಸುದ್ದಿ ಕೇಳಿ ಪತ್ನಿಯೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ಬುಧವಾರ ನಡೆದಿದೆ.
ನೇಹಾ ಪವಾರ್ ಎಂಬವರೇ ನೇಣಿಗೆ ಶರಣಾದ ಮಹಿಳೆ. ಇಂದೋರ್ನ ಬಿಜಲಾಪುರದ ಮನೆಯಲ್ಲಿ ಮಹಿಳೆ ಸಾವನ್ನಪ್ಪಿದ್ದಾಳೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
ನೇಹಾ ಅವರು ಇಂದೋರ್ ನ ಕಾಲೇಜಿನಲ್ಲಿ ಪ್ರೊಫೆಸರ್ ಆಗಿದ್ದವರು.
ಅವರ ಪತಿ ಪವನ್ ಪವಾರ್ (35) ಕೋವಿಡ್ ಸೋಂಕಿನಿಂದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
ಇದೇ ಆಘಾತದಿಂದ ಆಸ್ಪತ್ರೆಯಿಂದ ಮನೆಗೆ ಬಂದ ನೇಹಾ ಮನೆಯ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.