ರಾಜ್ಯ

ರಾಜಕೀಯ ಕಾರ್ಯಕ್ರಮಕ್ಕೆ ಐಎಎಸ್ ಅಧಿಕಾರಿಗಳನ್ನು ಬಳಸಿಕೊಂಡಿಲ್ಲ : ಸಿದ್ದರಾಮಯ್ಯ

*ರಾಜ್ಯದ ಅತಿಥಿಗಳ ಸ್ವಾಗತಕ್ಕೆ ಶಿಷ್ಟಾಚಾರದ ಪ್ರಕಾರ ಅಧಿಕಾರಿಗಳ ನಿಯೋಜನೆ: ಸಿಎಂ ಸಿದ್ದರಾಮಯ್ಯ*

ಬೆಂಗಳೂರು ಪ್ರಜಾಕಿರಣ.ಕಾಮ್  ಜು 18: ಬೆಂಗಳೂರಿಗೆ ಆಗಮಿಸಿದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ಸಚಿವರುಗಳನ್ನು ರಾಜ್ಯ ಅತಿಥಿಗಳೆಂದು ಪರಿಗಣಿಸಲಾಗಿದ್ದರಿಂದ ಶಿಷ್ಟಾಚಾರದ ಪ್ರಕಾರ ಆ ಎಲ್ಲ ಅತಿಥಿ ಗಣ್ಯರ ಸ್ವಾಗತಕ್ಕೆ ಮಾತ್ರ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ರಾಜಕೀಯ ಕಾರ್ಯಕ್ರಮಕ್ಕೆ ಐಎಎಸ್ ಅಧಿಕಾರಿಗಳನ್ನು ಬಳಸಿಕೊಂಡಿದ್ದಾರೆ ಎನ್ನುವ ವಿರೋಧ ಪಕ್ಷಗಳ ಟೀಕೆಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಿದ್ದಾರೆ.

ರಾಜ್ಯಕ್ಕೆ ಆಗಮಿಸಿದ ನಾನಾ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ಸಚಿವರುಗಳು ರಾಜ್ಯದ ಅತಿಥಿಗಳಾಗಿದ್ದರು. ಇದು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಪದ್ಧತಿಯಂತೆಯೇ ನಡೆದಿದೆ.

ಇಲ್ಲಿ ಯಾವುದೇ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ. ಬದಲಿಗೆ ಶಿಷ್ಟಾಚಾರದ ಪ್ರಕಾರವೇ ಗಣ್ಯರ ಸ್ವಾಗತಕ್ಕಷ್ಟೆ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತೇ ಹೊರತು ರಾಜಕೀಯ ಕಾರ್ಯಕ್ರಮಕ್ಕೆ ಅಧಿಕಾರಿಗಳನ್ನು ಬಳಸಿಕೊಂಡಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *