ರಾಜ್ಯ

ಕಾಶ್ಮೀರಿ ವಿದ್ಯಾರ್ಥಿಗಳಿಗೆ ಜಾಮೀನು : ಚಾರ್ಜ್ ಶೀಟ್ ಸಲ್ಲಿಸದ ಪೊಲೀಸರ ವಿರುದ್ದ ತನಿಖೆಗೆ ಆದೇಶ

ಬೆಳಗಾವಿ prajakiran.com : ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿ ಸಂಭ್ರಮಾಚರಣೆ ಮಾಡಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳಿಗೆ  ಜಾಮೀನು ಮಂಜೂರು ಆಗಲು ಪೊಲೀಸ್ ಇಲಾಖೆಯ ವೈಫಲ್ಯವೇ ಕಾರಣ ಎಂದು ಗೊತ್ತಾಗಿದೆ.

ಧಾರವಾಡ ಜಿಲ್ಲಾ ಪೊಲೀಸರು 90ದಿನದೊಳಗೆ ದೋಷಾರೋಪಣೆ ಪಟ್ಟಿ ಸಲ್ಲಿಸದೆ ಇರುವುದು ಆರೋಪಿಗಳಿಗೆ ಜಾಮೀನು ಪಡೆಯಲು ಅನುಕೂಲವಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.




ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯ ತನಿಖಾಧಿಕಾರಿ ಜಾಕ್ಸನ್ ಡಿಸೋಜಾ ಅವರು ಸಿ ಆರ್ ಪಿಸಿ 167 (2) ಅಡಿ 90 ದಿನಗಳ ಒಳಗೆ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸದ ಹಿನ್ನಲೆಯಲ್ಲಿ ಜಾಮೀನು ಸಲಿಸಾಗಿದೆ ಎನ್ನಲಾಗಿದೆ.

ಈ ಹಿನ್ನಲೆಯಲ್ಲಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬೆಳಗಾವಿಯ ಉತ್ತರ ವಲಯ ಪೊಲೀಸ್ ಮಹಾನಿರ್ದೇಶಕ ರಾಘವೇಂದ್ರ ಸುಹಾಸ್ ಅವರು ತನಿಖೆಗೆ ಆದೇಶಿಸಿದ್ದಾರೆ.

ಗಂಭೀರ ಪ್ರಕರಣದಲ್ಲಿಯೂ ಕರ್ತವ್ಯ ನಿರ್ಲಕ್ಷ್ಯ ತೋರಿದ ಹಿನ್ನಲೆಯಲ್ಲಿ ಈ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಗದಗ ಡಿವೈಎಸ್ಪಿ ಅವರನ್ನು ನೇಮಿಸಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.



PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *