ಅಪರಾಧ

ಧಾರವಾಡದಲ್ಲಿ ಮುಂದುವರೆದ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ : ಪೊಲೀಸರಿಂದ ಮತ್ತಿಬ್ಬರ ಬಂಧನ

ಧಾರವಾಡದಲ್ಲಿ ಮುಂದುವರೆದ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ : ಪೊಲೀಸರಿಂದ ಮತ್ತಿಬ್ಬರ ಬಂಧನ

ಧಾರವಾಡ prajakiran.com :
ಹುಬ್ಬಳ್ಳಿ-ಧಾರವಾಡದಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ ಜೋರಾಗಿ ನಡೆದಿದೆ.
ಅದೇ ರೀತಿ ಪೊಲೀಸ್ ಕಾರ್ಯಾಚರಣೆ ಕೂಡ ಮುಂದುವರೆದಿದೆ.

ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಇಬ್ಬರನ್ನು ಧಾರವಾಡದ ಉಪನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.


ಬಂಧಿತರನ್ನು ಮಾಳಾಪುರದ ಲತೀಫ್ ತಂಬೋಲಿ ಹಾಗೂ ರಸಲಾಪುರದ ಓಣಿಯ ಇಜಾಜ್ ಅಹ್ಮದ್ ಮನಿಯಾರ್ ಎಂದು ಗುರುತಿಸಲಾಗಿದೆ.

ದುಬೈನಲ್ಲಿ ನಡೆಯುತ್ತಿರುವ ಐಪಿಎಲ್ ಕ್ರಿಕೆಟ್ ಮ್ಯಾಚ್ ಗೆ ಸಂಬಂಧಿಸಿದಂತೆ ಇವರು ಬೆಟ್ಟಿಂಗ್ ಆಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಉಪನಗರ ಠಾಣೆ ಪೊಲೀಸರು ಈ ಇಬ್ಬರನ್ನೂ ಬಂಧಿಸಿ ಅವರಿಂದ 15,200 ನಗದು ಹಾಗೂ ಎರಡು ಮೊಬೈಲ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *