ಅಪರಾಧ

ನಟ ಜಗ್ಗೇಶ್ ಪುತ್ರ ಗುರುರಾಜ್ ಕಾರು ಅಪಘಾತ

ಬೆಂಗಳೂರು prajakiran.com : ಕನ್ನಡ ಚಿತ್ರರಂಗದ ಹಿರಿಯ ನಟ ನವರಸ ನಾಯಕ ಜಗ್ಗೇಶ್ ಪುತ್ರ ಗುರುರಾಜ್ ಅವರ ಕಾರು ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಗ್ರಾಮದ ಬಳಿ ಅಪಘಾತಕ್ಕೀಡಾಗಿದೆ.

ಇಂದು ಬೆಳಗ್ಗೆ ಅಗಲಗುರ್ಕಿ ಬಳಿ ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಗುರುರಾಜ್ ಅವರ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ನುಜ್ಜುಗೊಂಡಿದೆ.

ಕಾರಿನಲ್ಲಿದ್ದವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗುರುರಾಜ್ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.

ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *