ರಾಜ್ಯ

ಸಿಂದಗಿ ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ ಇನ್ನಿಲ್ಲ

ವಿಜಯಪುರ prajakiran.com :
ಸಿಂದಗಿ ಜೆಡಿಎಸ್ ಶಾಸಕರಾಗಿದ್ದ ಮಾಜಿ ಸಚಿವ ಎಂ.ಸಿ. ಮನಗೂಳಿ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಮನಗೂಳಿಯವರನ್ನು ಜ. 9ರಂದು ಕಲಬುರಗಿ ವಿಮಾನ ನಿಲ್ದಾಣದಿಂದ
ಬೆಂಗಳೂರಿಗೆ ಏರ್ ಲಿಫ್ಟ್ ಮೂಲಕ
ಸ್ಥಳಾಂತರಿಸಲಾಗಿತ್ತು.

ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ತಡರಾತ್ರಿ ಇಹಲೋಕ ತ್ಯಜಿಸಿದರು.

 

ಅವರು ಈ ಹಿಂದೆ ಜೆ.ಎಚ್.ಪಟೇಲ್ ಹಾಗೂ ಹೆಚ್. ಡಿ. ಕುಮಾರಸ್ವಾಮಿ ಸರಕಾರದಲ್ಲಿ ಸಚಿವರಾಗಿ ಕೆಲಸ ನಿರ್ವಹಿಸಿದ್ದರು.

ಎಂ.ಸಿ ಮನಗೂಳಿ ಅವರು ಪತ್ನಿ, ನಾಲ್ವರು ಪುತ್ರರು ಹಾಗೂ ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ.

ಅವರ ಅಗಲಿಕೆ ಜೆಡಿಎಸ್ ಪಕ್ಷಕ್ಕೆ ತುಂಬಲಾರದ ನಷ್ಟ ವನ್ನುಂಟು ಮಾಡಿದೆ. ಅವರ ನಿಧನಕ್ಕೆ ಜೆಡಿಎಸ್ ವರಿಷ್ಠ ಹೆಚ್. ಡಿ ದೇವೇಗೌಡ, ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಸೇರಿದಂತೆ ಹಲವಾರು ಗಣ್ಯರು ಕಂಬನಿ ಮಿಡಿದಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *