jds mla sufers corona
ರಾಜ್ಯ

ಗುರುಮಿಟ್ಕಲ್ ಜೆಡಿಎಸ್ ಶಾಸಕ ನಾಗನಗೌಡ ಕಂದಕೂರಗೂ ಕೊರೋನಾ

ಯಾದಗಿರಿ prajakiran.com : ಗುರುಮಿಟ್ಕಲ್ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಶಾಸಕ ನಾಗನಗೌಡ ಪಾಟೀಲ ಕಂದಕೂರ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಕುರಿತು ಅವರ ಕಿರಿಯ ಪುತ್ರ ಶರಣಗೌಡ ಕಂದಕೂರ ಫೇಸ್ ಬುಕ್ ಮೂಲಕ ಮಾಹಿತಿ ಪೋಸ್ಟ್ ಮಾಡಿದ್ದಾರೆ.

ಯಾದಗಿರಿ ಜಿಲ್ಲೆಯ ಗುರುಮಠಕಲ್ ‌ಕ್ಷೇತ್ರದ ಜೆಡಿಎಸ್ ಶಾಸಕ ನಾಗನಗೌಡ ಕಂದಕೂರ ಮತ್ತು ಅವರ ಹಿರಿಯ ಪುತ್ರ ಮಲ್ಲಿಕಾರ್ಜುನ ರೆಡ್ಡಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ ಎಂದು ಶರಣಗೌಡ ಕಂದಕೂರ ಫೇಸ್​​‘ಬುಕ್ ಮೂಲಕ ತಮ್ಮ ತಂದೆ ಹಾಗೂ ಸಹೋದರನಿಗೆ ಸೋಂಕು ತಗುಲಿದ ವಿಷಯ ಹಂಚಿಕೊಂಡಿದ್ದಾರೆ.

ತಂದೆ ಹಾಗೂ ಸಹೋದರನಿಗೆ ಯಾವುದೇ ರೋಗದ ಲಕ್ಷಣಗಳು ಇಲ್ಲದಿದ್ದರೂ ಸೋಂಕು ದೃಢಪಟ್ಟ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಿಎಸ್ ವೈ ಆಡಿಯೋ ಪ್ರಕರಣದಲ್ಲಿ ಭಾರೀ ಸದ್ದು ಮಾಡಿದ್ದ ಜೆಡಿಎಸ್ ಯುವ ಮಹಾ ಪ್ರಧಾನ ಕಾರ್ಯದರ್ಶಿ ಶರಣಗೌಡ ಕಂದಕೂರ ತಮ್ಮ ತಂದೆ ಹಾಗೂ ಸಹೋದರನ ಜೊತೆ ಸಂಪರ್ಕದಲ್ಲಿದ್ದರಿಂದಅವರಿಗೆ ಹೋಂ ಕ್ವಾರಂಟೈನ್ ನಲ್ಲಿ ಇರುವಂತೆ ಆರೋಗ್ಯ ಇಲಾಖೆ ಮನವಿ ಮಾಡಿಕೊಂಡಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *