ಅಂತಾರಾಷ್ಟ್ರೀಯ

ಕೇರಳದಲ್ಲಿ ಝಿಕಾ ವೈರಸ್ ಸೋಂಕಿತರ ಸಂಖ್ಯೆ ಮತ್ತೆ ಏರಿಕೆ

ತಿರುವನಂತಪುರಂ prajakiran.com : ಝಿಕಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೇ ಇದೆ.

ಭಾನುವಾರ ಮತ್ತೆ ಮೂರು ಝಿಕಾ ವೈರಸ್ ಸೋಂಕು ಪ್ರಕರಣ ಪತ್ತೆಯಾಗುವ ಮೂಲಕ ಕೇರಳದಲ್ಲಿ ಸೋಂಕಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.

ಆಲಪ್ಪಳದಲ್ಲಿ ರಾಷ್ಟ್ರೀಯ ವೈರಾಣು ಸಂಸ್ಥೆಯ ಘಟಕವನ್ನೂ ಆರಂಭಿಸಲಾಗಿದೆ.

ಹಾಗೆಯೇ ತ್ರಿಶ್ಶೂರ್‌, ತಿರುವನಂತಪುರ ಮತ್ತು ಕಲ್ಲಿಕೋಟೆಯಲ್ಲಿರುವಂಹ ಸರಕಾರಿ ವೈದ್ಯ ಕಾಲೇಜುಗಳಲ್ಲಿ ಝಿಕಾ ಸೋಂಕು ದೃಢಪಡಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್‌ ಹೇಳಿದ್ದಾರೆ.

ಝಿಕಾ ಸೋಂಕಿನ ಪತ್ತೆಗಾಗಿ 2,100 ಕಿಟ್‌ಗಳನ್ನು ರಾಷ್ಟ್ರೀಯ ವೈರಾಣು ಸಂಸ್ಥೆಯಿಂದ ಕೇರಳಕ್ಕೆ ನೀಡಲಾಗಿದೆ.

ಕೇರಳದ ಎಲ್ಲಾ ಜಿಲ್ಲೆಗಳಲ್ಲಿಯೂ ಗರ್ಭಿಣಿಯರ ಬಗ್ಗೆ ವಿಶೇಷ ಕಾಳಜಿ ಮಾಡಲಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *