ರಾಜ್ಯ

ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ಕೊಡಲಾಗದ ಅನ್ನ ಭಾಗ್ಯದ ಅಕ್ಕಿಯದೇ ಅಕ್ಷತೆ ಎಂದು ತಿಳಿಯುವುದು ಭ್ರಮಾಲೋಕದಲ್ಲಿರುವವರ ನಾಟಕ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ

 ಹುಬ್ಬಳ್ಳಿ ಪ್ರಜಾಕಿರಣ.ಕಾಮ್ ;    ಕೊಡಲಾಗದ ಅನ್ನ ಭಾಗ್ಯದ ಅಕ್ಕಿಯದೇ ಅಕ್ಷತೆ ಎಂದು ತಿಳಿಯುವುದು ಭ್ರಮಾಲೋಕದಲ್ಲಿ ಇರುವವರ ನಾಟಕ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.

ಅಯೋಧ್ಯೆ ರಾಮಮಂದಿರದ ಅಕ್ಷತೆಗೆ ಅನ್ನಭಾಗ್ಯದ ಅಕ್ಕಿ ಬಳಸಲಾಗ್ತಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು
“ರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದವರು ರಾಮ ಮಂದಿರ ಆಗಬಾರದೆಂದು ಪಣ ತೊಟ್ಟವರು, ಇವತ್ತು ಅಕ್ಷತೆ ಮಾಡುತ್ತಿರುವುದಕ್ಕೆ ಸಂತೋಷ ಪಡುತ್ತಿರುವುದು ಒಂದು ಸಂತೋಷವೇ ಎಂದು ವ್ಯಂಗ್ಯ ವಾಡಿದರು.

ಆದರೆ ಅವರು ಸಂತೋಷ ಪಡುತ್ತಿರುವ ಕಾರಣ ಮಾತ್ರ ವಿಚಿತ್ರ.
ಕೊಡಲಾಗದ ಅನ್ನ ಭಾಗ್ಯದ ಅಕ್ಕಿಯದೇ ಅಕ್ಷತೆ ಎಂದು ತಿಳಿಯುವುದು ಭ್ರಮಾಲೋಕದಲ್ಲಿ ಇರುವವರ ನಾಟಕ. ಕೊಡಲಾರದ ಅಕ್ಕಿಯಲ್ಲಿ ಅಕ್ಷತೆ ಆಗುತ್ತಿದೆ ಎಂದು ಪ್ರಭು ರಾಮನ ಅಕ್ಷತಾ ವಿಷಯದಲ್ಲೂ ಸುಳ್ಳು ಹೇಳುವ ಪಾಪಿಗಳು ನೀವು..” ಎಂದು ಡಿಕೆ ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *