ಮೈಸೂರು prajakiran.com : ಪ್ರಜಾವಾಣಿ, ವಿಜಯವಾಣಿ, ಕಸ್ತೂರಿ ಟಿವಿಯಲ್ಲಿ ಕೆಲಸ ಮಾಡಿದ್ದ ಉತ್ಸಾಹಿ ಪತ್ರಕರ್ತ ಪವನ್ ಹೆತ್ತೂರು (35) ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.
ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಪವನ್ ಹೆತ್ತೂರು ಆರೋಗ್ಯ ಗಂಭೀರವಾಗಿ, ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿ 1.30ರ ಸುಮಾರಿಗೆ ಕೊನೆಯುಸಿರೆಳೆದರು.
ಪ್ರಸ್ತುತ ಮೈಸೂರು ಪ್ರಜಾವಾಣಿ ಬ್ಯೂರೋ ದಲ್ಲಿ ಕೆಲಸ ಮಾಡುತ್ತಿದ್ದ ಪವನ್ ಹೆತ್ತೂರು ಮೂಲತಃ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೆತ್ತೂರು ಗ್ರಾಮದವರು.
ಅವರು ಪತ್ನಿ, ಇಬ್ಬರು ಚಿಕ್ಕ ಮಕ್ಕಳನ್ನು ಅಗಲಿದ್ದಾರೆ. ಪವನ್ ಬದುಕಿ ಬರಲೆಂದು ಅನೇಕರು ಪ್ರಾರ್ಥಿಸಿದ್ದು ಪ್ರಯೋಜನಕ್ಕೆ ಬರಲಿಲ್ಲ.
ಇದು ಪತ್ರಕರ್ತರ ಕುಟುಂಬವನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ. ಪತ್ರಕರ್ತ ಪವನ್ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ) ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಮೃತರ ಅಂತ್ಯಕ್ರಿಯೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆತ್ತೂರಿನಲ್ಲಿ ನಡೆಯಲಿದೆ.