ನವದೆಹಲಿ prajakiran.com :ವರ್ಷದ ಡಿಸೆಂಬರ್ ವೇಳೆಗೆ ದೇಶದ ಎಲ್ಲಾ ಜನರಿಗೂ ಲಸಿಕೆ ಲಭ್ಯವಾಗಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ತಿಳಿಸಿದ್ದಾರೆ.
ರಾಜಸ್ಥಾನದ ಬಿಜೆಪಿ ರಾಜ್ಯ ಅಧ್ಯಕ್ಷ ಸತೀಶ್ ಪೂನಿಯಾ ಮತ್ತು ರಾಜ್ಯದ ಪಕ್ಷದ ಸಂಸದರೊಂದಿಗೆ ಕೊರೋನಾ ಬಿಕಟ್ಟಿನ ಬಗ್ಗೆ ಸಭೆ ನಡೆಸಿದ ಬಳಿಕ ಮಾತನಾಡಿದರು.
ಭಾರತದಲ್ಲಿ 2 ಭಾರತೀಯ ಲಸಿಕೆಗಳನ್ನು ಅಭಿವೃದ್ಧಿಪಡಿಸಿದ್ದು, ಈವರೆಗೆ 18 ಕೋಟಿ ಜನ ಲಸಿಕೆ ಪಡೆದಿದ್ದಾರೆ.
ಸದ್ಯ ಲಸಿಕೆ ಕೊರತೆ ಕಾಡುತ್ತಿದ್ದು, ಡಿಸೆಂಬರ್ ಅಂತ್ಯದ ವೇಳೆಗೆ ಎಲ್ಲರಿಗೂ ಲಸಿಕೆ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ.