ರಾಜ್ಯ

ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ತೀರ್ಪು ಮಾ. 17 ಕ್ಕೆ

ಬೆಂಗಳೂರು prajakiran. com : ಧಾರವಾಡ ಜಿಲ್ಲೆಯ ಜಿಪಂ ಸದಸ್ಯ ಯೊಗೀಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಸಿಬಿಐ ಬಂಧಿಸಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿಯ ತೀರ್ಪು ಅನ್ನು ಮಾ. 17 ಕ್ಕೆ ಕಾಯ್ದಿರಿಸಿ
ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದೆ.

ಈ ಕುರಿತಂತೆ ಬುಧವಾರ ಸಂಜೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ಎದುರು ಸಿಬಿಐ ಪರವಾಗಿ ಸುಪ್ರೀಂ ಕೋರ್ಟ್ ಅಸೋಸಿಯೇಟ್ ಸಾಲಿಸೇಟರ್ ಜನರಲ್ ಎಸ್.ವಿ. ರಾಜು ಅವರು ಸುದೀರ್ಘ ವಾದವನ್ನು ಮಂಡಿಸಿದರೆ,
ಇನ್ನೂ ಇದಕ್ಕೆ ಪ್ರತಿಯಾಗಿ ಮಾಜಿ ಸಚಿವ ವಿನಯ ಕುಲಕರ್ಣಿ ಪರವಾಗಿ ಹಿರಿಯ ವಕೀಲ ಶಶಿಕಿರಣ ಶೆಟ್ಟಿ ಅವರು ಪ್ರತಿವಾದ ಮಂಡಿಸಿದರು. ವಾದ ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯವು
ಮುಂದಿನ ಮಾ. 17 ರಂದು ತೀರ್ಪು ಪ್ರಕಟಿಸುವುದಾಗಿ ನ್ಯಾಯಾಧೀಶರು ತಿಳಿಸಿದರು.

ಹೀಗಾಗಿ ನ್ಯಾಯಾಲಯವು ಸಿಬಿಐ ಪರ ವಕೀಲರು ಮಂಡಿಸಿದ ವಾದವನ್ನು ಎತ್ತಿ ಹಿಡಿಯುತ್ತಾರೆಯೇ ಇಲ್ಲವೇ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಪರ ವಕೀಲರು ಮಂಡಿಸಿದ ವಾದವನ್ನು ಪುರಸ್ಕರಿಸುತ್ತಾ ಎಂಬುದು ಕಾದು ನೋಡಬೇಕಿದೆ.

ಈಗಾಗಲೇ ಧಾರವಾಡ ಜಿಲ್ಲೆಯ ಮೂರನೇ ಅಧಿಕ ಹಾಗೂ ಸಿಬಿಐ ವಿಶೇಷ
ನ್ಯಾಯಾಲಯ ಮತ್ತು ಧಾರವಾಡದ ಹೈಕೋರ್ಟ್ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.

ಹೀಗಾಗಿ ಸದ್ಯ ಬೆಳಗಾವಿ ಜಿಲ್ಲೆಯ ಹಿಂಡಲಗಾ ಜೈಲಿನಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಗೆ ಜೈಲಾ ಬೈಲಾ ಎಂಬುದನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ನಿರ್ಧರಿಸಲಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *