ರಾಜ್ಯ

ಮಾಜಿ ಸಚಿವ ವಿನಯ ಕುಲಕರ್ಣಿ ನ್ಯಾಯಾಂಗ ಬಂಧನ ಅವಧಿ ಮತ್ತೆ 14 ದಿನ ವಿಸ್ತರಣೆ

ಧಾರವಾಡ prajakiran.com : ಧಾರವಾಡ ಜಿಲ್ಲೆಯ ಜಿಪಂ ಸದಸ್ಯ
ಯೋಗೀಶ್ ಗೌಡ ಗೌಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ ಕುಲಕರ್ಣಿ
ನ್ಯಾಯಾಂಗ ಬಂಧನದ ಅವಧಿ ಮತ್ತೆ 14 ದಿನ ವಿಸ್ತರಣೆಯಾಗಿದೆ.

ಸೋಮವಾರ
ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ವೀಡಿಯೋ ಕಾನ್ಪರೆನ್ಸ್ ಮೂಲಕ
ಧಾರವಾಡ ಜಿಲ್ಲೆಯ ಮೂರನೇ ಅಧಿಕ ಹಾಗೂ
ಸಿಬಿಐ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿದ ಬಳಿಕ ಈ ಮಹತ್ವದ ಆದೇಶ ಹೊರಡಿಸಿತು.

ನ್ಯಾಯಾಧೀಶರಾದ ಗಂಗಾಧರ ಸಿ.ಎಂ ಅವರು ಈ ಆದೇಶ ಹೊರಡಿಸಿದರು.

ಇದರಿಂದಾಗಿ ಮಾಜಿ ಸಚಿವ ವಿನಯ ಕುಲಕರ್ಣಿ ಬೆಳಗಾವಿ ಜಿಲ್ಲೆಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ
ಡಿಸೆಂಬರ್ 21 ರವರೆಗೆ ನ್ಯಾಯಾಂಗ ಬಂಧನದ ಅವಧಿ ಮುಂದುವರೆದಂತಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *