ರಾಜ್ಯ

ಪಿಎಸ್‌ಐ ಅಕ್ರಮ ನೇಮಕಾತಿ : ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ಆಯೋಗದಿಂದ ತನಿಖೆ

ಬೆಂಗಳೂರು ಪ್ರಜಾಕಿರಣ.ಕಾಮ್ : ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಬಹು ದೊಡ್ಡ
ಪಿಎಸ್‌ಐ ಅಕ್ರಮ ನೇಮಕಾತಿ ಹಗರಣದ ಗಂಭೀರ ಸ್ವರೂಪ ಮತ್ತು ಸಾರ್ವಜನಿಕ ಮಹತ್ವದ ಹಿನ್ನೆಲೆಯ ಕಾರಣಕ್ಕಾಗಿ ಮುಂದಿನ ತನಿಖೆಯನ್ನು ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳಾದ ಬಿ. ವೀರಪ್ಪ ಅವರ ನೇತೃತ್ವದ ಆಯೋಗದ ಮೂಲಕ ನ್ಯಾಯಾಂಗ ತನಿಖೆ ನಡೆಸಲು ತೀರ್ಮಾನಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು
ಈ ಮೂಲಕ ನಾವು ನುಡಿದಂತೆ ನಡೆದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.

ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದ ಪಿಎಸ್ಐ ಅಕ್ರಮ ನೇಮಕಾತಿ ಹಗರಣದಲ್ಲಿ ಹಿರಿಯ ಪೊಲೀಸ್ ಅಧಿಕಾರಿ ಅಮೃತ ಪೌಲ್ ಸೇರಿದಂತೆ ಅನೇಕ ಮರಿ ಪುಢಾರಿ ರಾಜಕಾರಣಿಗಳು ಜೈಲು ಪಾಲಾಗಿದ್ದರು.

ಇದೀಗ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿಗಳಾದ
ಬಿ.ವೀರಪ್ಪ ಅವರ ನೇತೃತ್ವದ ಆಯೋಗದಿಂದ
ತನಿಖೆ ನಡೆಸಲು ರಾಜ್ಯ ಸರಕಾರ ತೀರ್ಮಾನಿಸಿರುವುದು
ಹಲವರಿಗೆ ನಡುಕ ಉಂಟು ಮಾಡಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *