ನವದೆಹಲಿ prajakiran.com : ಕೇಂದ್ರ ನಾಗರಿಕ ವಿಮಾನಯಾನ ಸಚಿವರಾಗಿ ಜ್ಯೋತಿರಾದಿತ್ಯ ಸಿಂಧಿಯಾ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ.
ಇದೇ ಸಂದರ್ಭದಲ್ಲಿ ನಾಗರಿಕ ವಿಮಾನಯಾನ ಸಹಾಯಕ ಸಚಿವರಾಗಿ ಜನರಲ್ ವಿ.ಕೆ.ಸಿಂಗ್ ಅವರು ಕೂಡ ಅಧಿಕಾರ ವಹಿಸಿಕೊಂಡಿದ್ದಾರೆ.
2020ರ ಮಾರ್ಚ್ ತಿಂಗಳಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರಿದ್ದರು. ನಂತರ ಆ ಪಕ್ಷದ ರಾಜ್ಯಸಭಾ ಸದಸ್ಯರಾದರು. ಬುಧವಾರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.