ರಾಜ್ಯ

ಹಳೇಹುಬ್ಬಳ್ಳಿ ಗಲಾಟೆ ಪ್ರಕರಣ : ಬಂಧಿತ 88 ಆರೋಪಿಗಳು ಕಲಬುರಗಿ ಸೆಂಟ್ರಲ್ ಜೈಲಿಗೆ ಸ್ಥಳಾಂತರ

 ಹುಬ್ಬಳ್ಳಿ prajakiran.com : ಹಳೇಹುಬ್ಬಳ್ಳಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ 88 ಆರೋಪಿಗಳನ್ನು ಹುಬ್ಬಳ್ಳಿ ಸಬ್ ಜೈಲ್ ನಿಂದ ಕಲಬುರಗಿ ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸಲಾಗಿದೆ

ಇದಲ್ಲದೆ, ಗಲಭೆಗೆ ಕಾರಣರಾದ 15 ಆರೋಪಿಗಳನ್ನು ಬಂಧಿಸಿದ್ದಾರೆ. ಇದರಿಂದಾಗಿ ಇದೀಗ ಬಂಧಿತರ ಸಂಖ್ಯೆ 103ಕ್ಕೆ ಏರಿಕೆಯಾಗಿದೆ.

ಇವರನ್ನು ಹುಬ್ಬಳ್ಳಿಯ ನಾಲ್ಕನೇ ಹೆಚ್ಚುವರಿ ಜೆಎಂಎಫ್ ಸಿ ನ್ಯಾಯಾಲಯವು ಏ. 30ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಈವರೆಗೆ ದೇವಸ್ಥಾನ, ಮನೆ, ಆಸ್ಪತ್ರೆ ಹಾಗೂ ಪೋಸ್ಟ್ ಆಫೀಸ್ ಮೇಲೆ ಕಲ್ಲು ಎಸೆದಿರುವ ಹಾಗೂ ಸರ್ಕಾರಿ ಮತ್ತು ಖಾಸಗಿ ಆಸ್ತಿಪಾಸ್ತಿ ಹಾನಿಯಾದ ಒಟ್ಟು 12 ಪ್ರಕರಣಗಳು ದಾಖಲಾಗಿವೆ.

 ಗಲಭೆ ಪ್ರಕರಣದ ಕುರಿತು ಗುಪ್ತಚರ ಮಾಹಿತಿಯಿಂದ ಪೊಲೀಸ್ ಇಲಾಖೆ ಅಲರ್ಟ್ ಆಗಿದ್ದು, ಬಂಧಿತರ ಬಿಡುಗಡೆಗೆ ಆಗ್ರಹಿಸಿ ಮತ್ತೊಂದು ಹೋರಾಟಕ್ಕೆ ಕೆಲವು ಸಂಘಟನೆಗಳು ಮುಂದಾಗಿರುವ ಮಾಹಿತಿ  ಹಿನ್ನೆಲೆಯಲ್ಲಿ ಬಂಧಿತ 88 ಆರೋಪಿಗಳನ್ನು ಕಲಬುರಗಿಯ ಕೇಂದ್ರ ಕಾರಾಗೃಹಕ್ಕೆ ರವಾನೆ ಮಾಡಲಾಗಿದೆ.

ಒಟ್ಟಾರೆ ಗಲಭೆ ಆರೋಪಿಗಳ ಪರ ವಿರೋಧ ಹೇಳಿಕೆಗಳು ರಾಜಕೀಯ ತಿರುವು ಪಡೆದಿದ್ದು, ಪರಸ್ಪರ ಕೆಸರೆಚಾಟದಲ್ಲಿ ತೊಡಗಿದ್ದಾರೆ‌.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *