ಅಂತಾರಾಷ್ಟ್ರೀಯ

ಭಾರತಕ್ಕೆ ಕೋವಿಡ್ ಲಸಿಕೆ ಪೂರೈಸುವ ಭರವಸೆ ನೀಡಿದ ಕಮಲಾ ಹ್ಯಾರಿಸ್

ನವದೆಹಲಿ prajakiran.com : ಭಾರತಕ್ಕೆ ಕೊರೋನಾ ವೈರಸ್​ ಲಸಿಕೆ ಪೂರೈಕೆ ಮಾಡುವುದಾಗಿ ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಭರವಸೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್​ ಜತೆಯಲ್ಲಿ ದೂರವಾಣಿ ಮೂಲಕ ಮಾತನಾಡಿದ್ದು, ಈ ಕುರಿತು ಪ್ರಧಾನಿ ಮೋಡಿ ಟ್ವೀಟ್ ಮಾಡಿದ್ದು, ಅಮೆರಿಕದ ಜಾಗತಿಕ ಲಸಿಕೆ ಹಂಚಿಕೆ ಯೋಜನೆಯಡಿ ಭಾರತಕ್ಕೂ ಲಸಿಕೆ ಪೂರೈಕೆ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ.

ಯುಎಸ್ ಸರ್ಕಾರ ಮತ್ತು ಯುಎಸ್​ನಲ್ಲಿರುವ ಭಾರತೀಯ ವಲಸಿಗರ ಬೆಂಬಲ ಹಾಗೂ ಒಗ್ಗಟ್ಟಿಗೆ ಹ್ಯಾರಿಸ್ ಅವರಿಗೆ ಧನ್ಯವಾದ ಅರ್ಪಿಸುತ್ತೇನೆಂದು ಹೇಳಿದ್ದಾರೆ.

ಭಾರತ-ಅಮೆರಿಕ ಲಸಿಕೆ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಪ್ರಯತ್ನಗಳು ಹಾಗೂ ಕೋವಿಡ್ ನಂತರದ ಜಾಗತಿಕ ಆರೋಗ್ಯ ಮತ್ತು ಆರ್ಥಿಕ ಚೇತರಿಕೆಗೆ ಉಭಯ ದೇಶಗಳ ಸಹಭಾಗಿತ್ವದ ಬಗ್ಗೆಯೂ ಚರ್ಚಿಸಿದ್ದೇವೆ ಎಂದು ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *