ರಾಜ್ಯ

ಚೆನ್ನವೀರ ಕಣವಿ ಹೆಸರಿನಲ್ಲಿ ಧಾರವಾಡದ ಕರ್ನಾಟಕ ವಿವಿ, ಎಸ್‌ಡಿಎಂ ವಿವಿಯಲ್ಲಿ ಚಿನ್ನದ ಪದಕಗಳ ಸ್ಥಾಪನೆ

ಧಾರವಾಡ prajakiran. com ಮಾ.28 :

ಕವಿ,ನಾಡೋಜ ಡಾ.ಚೆನ್ನವೀರ ಕಣವಿ ಅವರ ನೆನಪಿಗಾಗಿ ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಎಸ್‌ಡಿಎಂ‌ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಸ್ವರ್ಣಪದಕಗಳನ್ನು ಸ್ಥಾಪಿಸಲಾಗುವುದು ಎಂದು ಅವರ ಪುತ್ರ ಪ್ರಿಯದರ್ಶಿ ಕಣವಿ ತಿಳಿಸಿದ್ದಾರೆ.

ಕಳೆದ ಜನವರಿ 14 ರಿಂದ ಫೆ.16 ವರೆಗೆ ಡಾ.ಚೆನ್ನವೀರ ಕಣವಿ ಅವರು ತೀವ್ರ ಅನಾರೋಗ್ಯದಿಂದ ಚಿಕಿತ್ಸೆಗೆ ದಾಖಲಾದ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿಯವರಾದ ಬಸವರಾಜ ಬೊಮ್ಮಾಯಿ, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ,ಕೇಂದ್ರ ಸಚಿವರಾದ ಪ್ರಲ್ಹಾದ ಜೋಷಿ ಸೇರಿದಂತೆ ಎಸ್‌ಡಿಎಂ ಆಸ್ಪತ್ರೆಯ ನಿರ್ದೇಶಕರು ,ವೈದ್ಯರು ,ಸಿಬ್ಬಂದಿ ನೀಡಿದ ಸಹಕಾರ,ತುಂಬಿದ ನೈತಿಕ ಸ್ಥೈರ್ಯಕ್ಕೆ ಕುಟುಂಬ ಋಣಿಯಾಗಿದೆ.

ಚೆನ್ನವೀರ ಕಣವಿ ಅವರ ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸಲು ಘೋಷಿಸಿದ್ದರಿಂದ, ಅದಕ್ಕಾಗಿ ಕುಟುಂಬವು ಭರಿಸಲು ಸಿದ್ಧವಿದ್ದ ಹಣವನ್ನು ಸಾಮಾಜಿಕ ಕಾರ್ಯಕ್ಕೆ ಸದ್ವಿನಿಯೋಗ ಮಾಡಲು ಉದ್ದೇಶಿಸಲಾಗಿದೆ.

ಶಿಕ್ಷಣ ಕ್ಷೇತ್ರದಲ್ಲಿ ಪ್ರತಿಭಾವಂತರನ್ನು ಪ್ರೋತ್ಸಾಹಿಸಲು ಕರ್ನಾಟಕ ವಿವಿ ಹಾಗೂ ಎಸ್‌ಡಿಎಂ ಡೀಮ್ಡ್ ವಿವಿಯಲ್ಲಿ ನಿಧಿ ಸ್ಥಾಪನೆ ಮಾಡಿ,ಸ್ವರ್ಣಪದಕಗಳನ್ನು ನೀಡಲು ಕುಟುಂಬದ ಸದಸ್ಯರು ತೀರ್ಮಾನಿಸಿದ್ದಾರೆ.

ಕಣವಿ ಅವರ ಅನಾರೋಗ್ಯದ ಸಂದರ್ಭದಲ್ಲಿ ಅವರಿಗಾಗಿ ಮಿಡಿದ ನಾಡಿನ ಸಮಸ್ತ ಜನತೆಗೆ,ಮಾಧ್ಯಮಗಳಿಗೆ,ಮಠಾಧೀಶರಿಗೆ ಕೃತಜ್ಞತೆಗಳನ್ನು ಕುಟುಂಬ ತಿಳಿಸಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *