ಅಂತಾರಾಷ್ಟ್ರೀಯ

ಹಿರಿಯ ಸಾಹಿತಿ ಡಾ.ಚೆನ್ನವೀರ ಕಣವಿ ಆರೋಗ್ಯದಲ್ಲಿ ಚೇತರಿಕೆ

ಧಾರವಾಡದ ಎಸ್ ಡಿ ಎಂ ಆಸ್ಪತ್ರೆಯ ಚಿಕಿತ್ಸೆ ಮುಂದುವರಿಕೆ

ಧಾರವಾಡ prajakiran.com ಜ.15 : ಉಸಿರಾಟದ ತೊಂದರೆಯಿಂದ ಧಾರವಾಡದ ಎಸ್.ಡಿ.ಎಮ್. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ
ಹಿರಿಯ ಕವಿಗಳಾದ ನಾಡೋಜ ಡಾ.ಚೆನ್ನವೀರ ಕಣವಿ ಅವರ ಆರೋಗ್ಯದಲ್ಲಿ ಚೇತರಿಕೆ ಆಗಿದ್ದು, ಆರೋಗ್ಯ ಸ್ಥಿರವಾಗಿದೆ.
ಆಸ್ಪತ್ರೆ ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ.

ಜಿಲ್ಲಾಡಳಿತ ಎಸ್.ಡಿ.ಎಮ್. ಆಸ್ಪತ್ರೆಯ ವೈದ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ನಾಡೋಜ ಡಾ. ಚೆನ್ನವೀರ ಕಣವಿ ಅವರ ಆರೋಗ್ಯ ಕ್ಷೇಮತೆಗೆ ಅಗತ್ಯ ಕ್ರಮವಹಿಸಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಚೆನ್ನವೀರ ಕಣವಿ ಶೀಘ್ರ ಚೇತರಿಕೆಗೆ ಮುಖ್ಯಮಂತ್ರಿಗಳ ಹಾರೈಕೆ

ಧಾರವಾಡದ ಎಸ್.ಡಿ.ಎಂ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾಡಿನ ಹಿರಿಯ ಸಾಹಿತಿ, ಕವಿ, ನಾಡೋಜ ಡಾ|| ಚೆನ್ನವೀರ ಕಣವಿ ಅವರು ಶೀಘ್ರ ವಾಗಿ ಗುಣಮುಖರಾಗುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾರೈಸಿದ್ದಾರೆ.

ಕಣವಿ ಅವರ ಆರೋಗ್ಯದ ಕುರಿತು ಅವರ ಕುಟುಂಬದ ಸದಸ್ಯರೊಂದಿಗೆ ಇಂದು ಮಾತನಾಡಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಮುಖ್ಯ ಮಂತ್ರಿಗಳು ಡಾ|| ಚೆನ್ನವೀರ ಕಣವಿ ಅವರು ಶೀಘ್ರವಾಗಿ ಗುಣಮುಖರಾಗಲೆಂದು ಟ್ವೀಟ್ ಮಾಡಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *