ರಾಜ್ಯ

ಚೆಂಬೆಳಕಿನ ಕವಿ ನಾಡೋಜ ಡಾ. ಚೆನ್ನವೀರ ಕಣವಿ ಇನ್ನು ನೆನಪು ಮಾತ್ರ

ಧಾರವಾಡ prajakiran.com : ಕಳೆದ ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ನಾಡೋಜ ಡಾ.ಚೆನ್ನವೀರ ಕಣವಿ ಅವರು ಚಿಕಿತ್ಸೆ ಫಲಿಸದೆ ಬುಧವಾರ ಬೆಳಗ್ಗೆ ವಿಧಿವಶರಾದರು.

ಅವರು ಧಾರವಾಡದ ಎಸ್ ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಚನ್ನವೀರ ಕಣವಿ ಅವರಿಗೆ 92 ವರ್ಷ ವಯಸ್ಸಾಗಿತ್ತು.

ಅವರು ಮೂಲತಃ ಗದಗ ತಾಲೂಕಿನ ಹೊಂಬಳ ಗ್ರಾಮದಲ್ಲಿ 28-6-1928 ರಲ್ಲಿ ಸಕ್ಕರೆಪ್ಪ ಹಾಗೂ ಪಾರ್ವತವ್ವ ದಂಪತಿಗಳ ಉದರದಲ್ಲಿನಿಸಿದ್ದರು.

ತಂದೆ ಸಕ್ಕರೆಪ್ಪ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ಆರಂಭದಲ್ಲಿ ಗದಗ ತಾಲೂಕಿನ ಶಿರುಂದದಲ್ಲಿ ಶಿಕ್ಷಕರಾಗಿದ್ದರಿಂದ
ನಾಲ್ಕನೇ ತರಗತಿಯವರೆಗೆ ಶಿಕ್ಷಣದ
ಬಳಿಕ ಧಾರವಾಡ ತಾಲೂಕಿನ ಗರಗ ಶಾಲೆಯಲ್ಲಿ 7ನೇ ತರಗತಿವರೆಗೆ ಶಿಕ್ಷಣ ಪಡೆದಿದ್ದರು.

ಬಾಲ್ಯದಲ್ಲಿ ಗಾಂಧಿ ಟೋಪಿ ನಾಟಕದಲ್ಲಿ ಅಭಿನಯಿಸಿದ್ದ ಕಣವಿ ಅವರು
ಮುಲ್ಕಿ ಪರೀಕ್ಷೆಯಲ್ಲಿ ಧಾರವಾಡ ಕೇಂದ್ರಕ್ಕೆ ಪ್ರಥಮ ಸ್ಥಾನ ಪಡೆದಿದ್ದರು.

ಧಾರವಾಡದ ಆರ್ ಎಲ್ ಎಸ್ ನಲ್ಲಿ ಹೈಸ್ಕೂಲ್ ಶಿಕ್ಷಣವನ್ನು ಮುರುಘಾಮಠದಲ್ಲಿದ್ದುಕೊಂಡು ಪಡೆದಿದ್ದರು.

ಕರ್ನಾಟಕ ಕಾಲೇಜ್ ನಲ್ಲಿ ಬಿಎ
ವಿದ್ಯಾರ್ಥಿಯಾಗಿದ್ದಾಗ ಕಣವಿಯವರ ಕವನಗಳನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿ ಡಿವಿ ಗುಂಡಪ್ಪನವರು ಶುಭ ಹಾರೈಸಿದ್ದರು.

1952ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ ಪಡೆದ ಅವರು
ಅದೇ ಕವಿವಿಯ ಪ್ರಸಾರಾಂಗ ವಿಭಾಗದ ಕಾರ್ಯದರ್ಶಿಯಾಗಿ ಸೇವೆ ಆರಂಭಿಸಿದ್ದರು.

ಬಳಿಕ 1956ರಲ್ಲಿ ಪ್ರಸಾರಾಂಗ ವಿಭಾಗದ ನಿರ್ದೇಶಕರಾಗಿ 1983ರವರೆಗೆ ಸೇವೆ ಸಲ್ಲಿಸಿದರು.

ಪತ್ನಿ ಶಾಂತಾದೇವಿ ನಿಧನದ ಬಳಿಕ ಸ್ವಲ್ಪ ಲವಲವಿಕೆ ಕಳೆದುಕೊಂಡಿದ್ದರು.

ಕಾವ್ಯಾಕ್ಷಿ, ಭಾವಜೀವಿ, ಆಕಾಶಬುಟ್ಟಿ, ಮಧುಚಂದ್ರ, ಮಣ್ಣಿನ ಮೆರವಣಿಗೆ, ದಾರಿ ದೀಪ, ನೆಲ ಮುಗಿಲು, ಎರಡು ದಡ, ನಗರದಲ್ಲಿ ನೆರಳು, ಜೀವಧ್ವನಿ, ಕಾರ್ತಿಕದ ಮೋಡ, ಜೀನಿಯಾ, ಹೊಂಬೆಳಕು, ಶಿಶಿರದಲ್ಲಿ ಬಂದ ಸ್ನೇಹಿತ, ಚಿರಂತನ ದಾಹ, ಸೇರಿ 15ಕ್ಕೂ ಹೆಚ್ಚು ಕವನ ಸಂಕಲನ ಪ್ರಕಟವಾಗಿವೆ‌.

ಸಾಹಿತ್ಯ ಚಿಂತನ, ಕಾವ್ಯಾನುಸಂಧಾನ, ಸಮಾಹಿತ, ಮಧುರಚೆನ್ನ, ಸಮತೋಲನ ವಿಮರ್ಶಾತ್ಮಕ ಕೃತಿಗಳಾಗಿವೆ.

ಹಕ್ಕಿ ಪುಕ್ಕ ಮತ್ತು ಚಿಣ್ಣರ ಲೋಕವ ತೆರೆಯೋಣ ಮಕ್ಕಳ ಕವನ ಸಂಕಲನಗಳು.

ಕಣವಿಯವರಿಗೆ 1981ರಲ್ಲಿ ಜೀವಧ್ವನಿ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
1996ರಲ್ಲಿ ಹಾಸನದಲ್ಲಿ ನಡೆದ 65ನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಸ್ಥಾನ
2008ರ ಆಳ್ವಾಸ್ ನುಡಿಸಿರಿ ಸಮ್ಮೇಳನಾಧ್ಯಕ್ಷತೆ

ಜೀವಧ್ವನಿ ಕವನ ಸಂಗ್ರಹಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ,
ರಾಜ್ಯೋತ್ಸವ ಪ್ರಶಸ್ತಿ, ಪಂಪ ಪ್ರಶಸ್ತಿ, ಬಸವ ಗುರು ಕಾರುಣ್ಯ ಪ್ರಶಸ್ತಿ, ನಾಡೋಜ ಪ್ರಶಸ್ತಿ,
ಕರ್ನಾಟಕ ಕವಿರತ್ನ ಪ್ರಶಸ್ತಿ, ಅನಕೃ ನಿರ್ಮಾಣ ಪ್ರಶಸ್ತಿ, 2020ರಲ್ಲಿ ಕರ್ನಾಟಕದ ಕೇಂದ್ರೀಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್
ಸೇರಿ ಹತ್ತು ಹಲವು ಪ್ರಶಸ್ತಿಗಳು ಸಂದಿವೆ.

ಅವರ ನಿಧನದಿಂದ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ನಿಧನಕ್ಕೆ ಅನೇಕರು ಕಂಬನಿ ಮಿಡಿದಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *