education minister sureshkumar
ರಾಜ್ಯ

ರಾಜ್ಯದ ಶಾಲೆಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ : ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು prajakiran.com : ಶಾಲೆಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ. ಕಾನೂನು ಉಲ್ಲಂಘಿಸುವ ಶಾಲೆಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಕನ್ನಡವನ್ನು ಒಂದು ಭಾಷೆಯನ್ನಾಗಿ ಕಲಿಸುವುದರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತಪಡಿಸಿತ್ತು.

ಈ ಹಿನ್ನೆಲೆ ಮಾತನಾಡಿದ ಅವರು, ಭಾಷೆಯಾಗಿ ಕನ್ನಡ ಕಲಿಸುವ ವಿಷಯದಲ್ಲಿ ಯಾವುದೇ ರಾಜಿಯಿಲ್ಲ.

ಕನ್ನಡ ನೆಲದಲ್ಲಿರುವ ಯಾವುದೇ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಒಂದು ಭಾಷೆಯನ್ನಾಗಿ ಕಲಿಸುವ ಸಂಬಂಧ ಕನ್ನಡ ಕಲಿಕಾ ಅಧಿನಿಯಮ-2015ರ ಕಾಯ್ದೆ ಅನುಷ್ಠಾನದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ.

ಒಂದರಿಂದ ಹತ್ತನೇ ತರಗತಿಯವರಿಗೆ ಹಂತಹಂತವಾಗಿ ಕನ್ನಡ ಭಾಷೆಯನ್ನು ಪ್ರಥಮ ಇಲ್ಲವೇ ದ್ವಿತೀಯ ಭಾಷೆಯನ್ನಾಗಿ ಕಲಿಸಬೇಕಿದೆ.

ಕೇಂದ್ರ ಪಠ್ಯಕ್ರಮದ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಇಲ್ಲವೇ ದ್ವಿತೀಯ ಭಾಷೆಯನ್ನಾಗಿ ಕಲಿಸುವುದನ್ನು ಹೊರ ರಾಜ್ಯದ ಪೋಷಕರ ಒಂದು ವರ್ಗ ವಿರೋಧಿಸುತ್ತಿದೆ.

ಪೋಷಕರೂ ಕೂಡ ತಮ್ಮ ಜವಾಬ್ದಾರಿಯನ್ನು ಅರಿತು ಸರ್ಕಾರದ ಕಾಯ್ದೆಯನ್ನು ಗೌರವಿಸಬೇಕು. ತಮ್ಮ ಮಕ್ಕಳನ್ನು ನೆಲದ ಭಾಷೆ ಕಲಿಯಲು ಪ್ರೇರೇಪಣೆ ನೀಡಬೇಕು ಎಂದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *